ಆ್ಯಪ್ನಗರ

ನೀರು, ಮೇವಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ

ಹುಕ್ಕೇರಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಜನತೆಗೆ ...

Vijaya Karnataka 29 Feb 2020, 5:00 am
ಹುಕ್ಕೇರಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಜನತೆಗೆ ಬೇಸಿಗೆಯಲ್ಲಿಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಸೇರಿದಂತೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web 28 HUKKERI 01_53
ಹುಕ್ಕೇರಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿಯಮಕಮರಡಿ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿದರು.


ಇಲ್ಲಿನ ತಾಪಂ ಸಭಾಭವನದಲ್ಲಿಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿಅವರು ಮಾತನಾಡಿದರು.

ಈಗಾಗಲೇ ಬಿಸಿಲಿನ ಪ್ರಖರತೆ ಹೆಚ್ಚುತ್ತಿದ್ದು ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳಲ್ಲಿಬೋರ್‌ವೆಲ್‌ ಇಲ್ಲವೇ ಟ್ಯಾಂಕರ್‌ ನೀರಿಗಾಗಿ ಸಿದ್ಧತೆ ಮಾಡಿಕೊಳ್ಳಬೇಕು. ನೀರು ಪೂರೈಕೆ ಮಾರ್ಗಗಳಿಗೆ ವಿದ್ಯುತ್‌ ನಿಲುಗಡೆಯಾಗದಂತೆ ನೋಡಿಕೊಳ್ಳಬೇಕು. 14 ನೇ ಹಣಕಾಸು ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ತಾಲೂಕಿನ ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕೆಲಸಗಳಲ್ಲಿಸಂಸದರ ಆಪ್ತ ಸಹಾಯಕ ಹಸ್ತಕ್ಷೇಪ ಮಾಡುತ್ತಿದ್ದಾನೆ. ಇದರಿಂದ ಅಧಿಕಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಅಸಮಾಧಾನ ವ್ಯಕ್ತಪಡಿಸಿದ ಸಾರ್ವಜನಿಕರು, ''ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳ ಅನುದಾನ ಹಂಚಿಕೆ, ಮನೆ ಫಲಾನುಭವಿಗಳ ಆಯ್ಕೆ, ಉದ್ಯೋಗ ಖಾತ್ರಿ ಮತ್ತು 14ನೇ ಹಣಕಾಸು ಆಯೋಗದ ಅನುದಾನ ಬಳಕೆ, ನೆರೆ ಪರಿಹಾರದ ವಿಷಯಗಳಲ್ಲಿಇದೇ ರೀತಿ ಮೂಗುತೂರಿಸುವುದು ಮುಂದುವರಿದರೆ ತಾವೇ ಬುದ್ಧಿ ಕಲಿಸುತ್ತೇವೆ'' ಎಂದು ಎಚ್ಚರಿಸಿದರು.

ಮುಖಂಡರಾದ ಅಶೋಕ ಅಂಕಲಗಿ ಇಲಿಯಾಸ್‌ ಇನಾಮದಾರ್‌, ಮಾರುತಿ ಕುಂದಿ, ಫರೀದಾ ಮುಲ್ಲಾಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ