ಆ್ಯಪ್ನಗರ

ಯಾವುದೇ ಜ್ವರವಿದ್ದರೂ ಚಿಕಿತ್ಸೆ ಪಡೆಯಿರಿ

ಬೆಳಗಾವಿ: ಯಾವುದೇ ರೀತಿಯ ಜ್ವರ ಇದ್ದರೂ ಆಸ್ಪತ್ರೆಯಲ್ಲಿ ...

Vijaya Karnataka 27 Jul 2019, 5:00 am
ಬೆಳಗಾವಿ: ಯಾವುದೇ ರೀತಿಯ ಜ್ವರ ಇದ್ದರೂ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಇದರಿಂದ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಸಾಧ್ಯ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿಕಾಂತ ಮುನ್ಯಾಳ ಹೇಳಿದರು.
Vijaya Karnataka Web BEL-26 LBS 7


ನಗರದ ವಂಟಮುರಿ ಕಾಲನಿಯಲ್ಲಿ ಶುಕ್ರವಾರ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಗಳ ಸಹಯೋಗದಲ್ಲಿ ಡೆಂಗೆ ವಿರೋಧಿ ಮಾಸಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ ಮಾಡುತ್ತಿದ್ದಾರೆ. ಜತೆಗೆ ಡೆಂಗೆ ರೋಗದ ಲಕ್ಷ ಣಗಳು, ಮುಂಜಾಗ್ರತಾ ಕ್ರಮ ಹಾಗೂ ನಿಯಂತ್ರಣದ ಕುರಿತು ಅರಿವು ಮೂಡಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿಕಾಂತ ಮುನ್ಯಾಳ ಅವರು ಜಾಗೃತಿ ಜಾಥಾಗೆ ಚಾಲನೆ ನೀಡಿದರು.

ಪಾಲಿಕೆ ಆರೋಗ್ಯಾಧಿಕಾರಿ ಡಾ. ಶಶಿಧರ ನಾಡಗೌಡ, ಜಿಲ್ಲಾ ಸರ್ವೇಕ್ಷ ಣಾಧಿಕಾರಿ ಡಾ. ಬಿ.ಎನ್‌.ತುಕ್ಕಾರ, ಡಾ. ಸಾವಿತ್ರಿ ಭೆಂಡಿಗೇರಿ, ಡಾ. ಅನಿಲ ಕೊರಬು, ಡಾ. ಸಂಜಯ ಡುಮ್ಮಗೋಳ, ಡಾ. ಗಣಪತಿ ಬಾರ್ಕಿ, ಶಿಲ್ಪಾ ಹಳೇಮನಿ, ಡಾ. ಶಿವಲೀಲಾ ಶಿರೋಳ, ಬಿ.ಪಿ. ಯಲಿಗಾರ ಮತ್ತಿತರರು ಇದ್ದರು.

ಬೆಳಗಾವಿ, ಚಿಕ್ಕೋಡಿ, ಅಥಣಿಯಲ್ಲಿ ಹೆಚ್ಚು ಡೆಂಗೆ ಪ್ರಕರಣ
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಎಂ.ಎಸ್‌.ಪಲ್ಲೇದ ಮಾತನಾಡಿ, ಕಳೆದ ಜನವರಿಯಿಂದ ಇದುವರೆಗೆ ಜಿಲ್ಲೆಯಲ್ಲಿ 246 ರಕ್ತ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 26 ಜನರಿಗೆ ಡೆಂಗೆ ಇರುವುದು ದೃಢಪಟ್ಟಿದೆ. ಬೆಳಗಾವಿ ನಗರ, ಚಿಕ್ಕೋಡಿ ಹಾಗೂ ಅಥಣಿಯಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿವೆ. ಅದರಂತೆ ಜಿಲ್ಲಾಸ್ಪತ್ರೆಯಲ್ಲಿ 167 ಪ್ರಕರಣಗಳು ದೃಢಪಟ್ಟಿವೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ