ಆ್ಯಪ್ನಗರ

ಬೆಳಗಾವಿ ಅಭಿವೃದ್ಧಿ ಕುರಿತು ಸಿಎಂ-ಜಾರಕಿಹೊಳಿ ಚರ್ಚೆ

ಬೆಳಗಾವಿ: ಪೌರಾಡಳಿತ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬುಧವಾರ ...

Vijaya Karnataka 21 Jun 2018, 5:00 am
ಬೆಳಗಾವಿ: ಪೌರಾಡಳಿತ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
Vijaya Karnataka Web talk about the development of belagavi
ಬೆಳಗಾವಿ ಅಭಿವೃದ್ಧಿ ಕುರಿತು ಸಿಎಂ-ಜಾರಕಿಹೊಳಿ ಚರ್ಚೆ


ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಅವರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಇಲಾಖೆಗೆ ಸಂಬಂಧಿಸಿದ ಮತ್ತು ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಕೆಲವು ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿರುವುದಾಗಿ ರಮೇಶ್‌ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.

''ಪ್ರಮಾಣ ವಚನ ಸ್ವೀಕರಿಸಿದ ನಂತರ ನೇರವಾಗಿ ಬೆಳಗಾವಿಗೆ ಆಗಮಿಸಿದ್ದೆ. ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಇಲಾಖೆಯಲ್ಲಿ ಮತ್ತು ಜಿಲ್ಲೆಯಲ್ಲಿ ತುರ್ತಾಗಿ ಆಗಬೇಕಾದ ಕೆಲವು ಕೆಲಸಗಳ ಕುರಿತಂತೆ ಅವರಿಗೆ ಮಾಹಿತಿ ನೀಡಿದ್ದೇನೆ'', ಎಂದು ಅವರು ತಿಳಿಸಿದರು.

ವಿಧಾನಪರಿಷತ್‌ ಸದಸ್ಯ ವಿವೇಕರಾವ್‌ ಪಾಟೀಲ ಜೊತೆಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ