ಆ್ಯಪ್ನಗರ

ಗಡಿ ಸಮಸ್ಯೆ ಕುರಿತು ಸಿಎಂ ಜತೆ ಚರ್ಚೆ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ...

Vijaya Karnataka 3 Dec 2018, 5:00 am
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.10ರಿಂದ ಆರಂಭವಾಗುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಗಡಿಭಾಗದ ಕನ್ನಡಿಗರ ಸಮಸ್ಯೆಗಳ ಕುರಿತು ಮತ್ತು ಗಡಿ ವಿಚಾರವಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲು ಕನ್ನಡಪರ ಸಂಘಟನೆಗಳ ಮುಖಂಡರು ತೀರ್ಮಾನಿಸಿದ್ದಾರೆ.
Vijaya Karnataka Web BEL-2 LBS 1


ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಅಧಿವೇಶನ ಸಮಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಸಂಪುಟ ಹಾಗೂ ಅಧಿಕಾರಿಗಳ ವರ್ಗ ಬೆಳಗಾವಿಗೆ ಆಗಮಿಸುತ್ತದೆ. ಈ ವೇಳೆ ಗಡಿಭಾಗದ ಜನರ ಅನೇಕ ಸಮಸ್ಯೆಗಳು ಮತ್ತು ಗಡಿ ವಿಚಾರವಾಗಿ ಮಹತ್ವದ ವಿಷಯಗಳ ಕುರಿತು ಚರ್ಚಿಸಲು ನಿರ್ಧರಿಸಿದ್ದಾರೆ.

ಕನ್ನಡಪರ ಹೋರಾಟಗಾರರಾದ ಮಾಜಿ ಮೇಯರ್‌ ಸಿದ್ಧನಗೌಡ ಪಾಟೀಲ, ಅಶೋಕ ಚಂದರಗಿ, ಮಹಾದೇವ ತಳವಾರ, ದೀಪಕ ಗುಡಗನಟ್ಟಿ, ಎಂ.ಜಿ. ಮಕಾನದಾರ, ಶಿವಪ್ಪ ಶಮರಂತ, ರಾಜು ಕೋಲಾ, ಯಶೋಧ ಬಿರಡಿ, ಬಾಬು ಸಂಗೋಡಿ, ರಾಜು ಕುಸೋಜಿ, ಸಾಗರ ಬೋರಗಲ್‌ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ