ಆ್ಯಪ್ನಗರ

ನಾನಾ ಬೇಡಿಕೆ ಈಡೇರಿಸುವಂತೆ ಶಿಕ್ಷಕರ ಪ್ರತಿಭಟನೆ

ಬೆಳಗಾವಿ: ಶಿಕ್ಷ ಕರನ್ನು ಶಿಕ್ಷ ಣೇತರ ಕಾರ್ಯಗಳಿಂದ ಮುಕ್ತಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ...

Vijaya Karnataka 17 Feb 2019, 5:00 am
ಬೆಳಗಾವಿ : ಶಿಕ್ಷ ಕರನ್ನು ಶಿಕ್ಷ ಣೇತರ ಕಾರ್ಯಗಳಿಂದ ಮುಕ್ತಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷ ಕರ ಸಂಘದ ಜಿಲ್ಲಾ ಘಟಕದ ಸದಸ್ಯರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web BLG-1602-2-52-16PRAMOD6


ಗ್ರಾಮೀಣ ಕೃಪಾಂಕ ಸೌಲಭ್ಯ ಪಡೆದುಕೊಂಡು ಸೇವೆಯಿಂದ ವಜಾಗೊಂಡಿರುವ ಶಿಕ್ಷ ಕರ ಪೂರ್ಣ ಸೇವೆ ಪರಿಗಣಿಸಿ ಎಲ್ಲ ಸೌಲಭ್ಯಗಳನ್ನು ನೀಡಬೇಕು. 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಬಡ್ತಿ ಹೊಂದಿದ ಮುಖ್ಯಶಿಕ್ಷಕರಿಗೆ ಸೇವಾ ವರ್ಷಗಳ ಆರ್ಥಿಕ ಸೌಲಭ್ಯ ನೀಡಬೇಕು. ತಕ್ಷ ಣ ನೂತನ ಪಿಂಚಣಿ ಯೋಜನೆ ರದ್ದುಪಡಿಸಬೇಕು. ಸೇವಾನಿರತ ಪದವೀಧರ ಶಿಕ್ಷ ಕರಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಯಕುಮಾರ ಹೆಬಳಿ, ಮಲ್ಲಿಕಾರ್ಜುನ ಸಿದ್ದನಗೌಡರ, ಎಸ್‌.ಡಿ. ಗಂಗಣ್ಣವರ, ರಮೇಶ ಗೋಣಿ, ಸುರೇಶ ಏಣಿ, ಜಯಶ್ರೀ ಪಾಟೀಲ, ಎ.ಎಂ. ಮುರುಗೋಡ, ಜಿ.ಜಿ. ಜುಟ್ಟನವರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ