ಆ್ಯಪ್ನಗರ

ಖಾನಾಪುರ ಕಾಡಿಗೆ ಮರಳಿದ ವೈಭವ

ಖಾನಾಪುರ: ಬೇಸಿಗೆ ಮುಗಿದು ಮಳೆಗಾಲ ಪ್ರಾರಂಭಗೊಳ್ಳುವುದರ ...

Vijaya Karnataka 10 Jun 2018, 5:00 am
ಖಾನಾಪುರ: ಬೇಸಿಗೆ ಮುಗಿದು ಮಳೆಗಾಲ ಪ್ರಾರಂಭಗೊಳ್ಳುವುದರ ಪ್ರತೀಕವಾಗಿ ತಾಲೂಕಿನ ಪಶ್ಚಿಮ ಘಟ್ಟದ ಅರಣ್ಯಪ್ರದೇಶದಲ್ಲಿ ಬಿಸಿಲು ಮಾಯವಾಗಿ ಮಳೆ ಸುರಿಸಲು ಆರಂಭಿಸಿದೆ. ಪರಿಣಾಮ ದಟ್ಟ ಅರಣ್ಯವನ್ನು ಸುತ್ತುವರೆದ ಬೆಟ್ಟಗಳನ್ನು ಚುಂಬಿಸಲು ಮೋಡಗಳು ಹಾತೋರೆಯುತ್ತಿವೆ. ತುಂತುರು ಮಳೆಯಿಂದ ನಿರ್ಮಾಣಗೊಂಡ ಇಬ್ಬನಿಯಿಂದ ಬೆಟ್ಟಗುಡ್ಡಗಳು ನವವಧುವಿನಂತೆ ಕಂಗೊಳಿಸುತ್ತಿವೆ.
Vijaya Karnataka Web BEL-9KHANAPUR1


ಆಗಾಗ ಬೀಸುವ ಜೋರಾದ ತಣ್ಣನೆಯ ಗಾಳಿ, ಕೆಲವೊಮ್ಮೆ ಸಣ್ಣ, ಕೆಲವೊಮ್ಮೆ ದಪ್ಪ ಹನಿಗಳಿಂದ ಉದುರುವ ಮಳೆ, ಕಣ್ಣು ಹಾಯಿಸಿದಲ್ಲೆಲ್ಲ ಗೋಚರಿಸುವ ಹಚ್ಚ ಹಸಿರಿನ ಬೆಟ್ಟಗಳು, ಈಗ ತಾನೆ ಚಿಗುರೊಡೆಯುತ್ತಿರುವ ಹುಲ್ಲು, ಭೂದೇವಿಗೆ ಹಸಿರು ಬಣ್ಣದ ಸೀರೆಯನ್ನು ಉಡಿಸಿದಂತೆ ಕಾಣುವ ಭತ್ತದ ಗದ್ದೆಗಳು ಮಳೆಗಾಲ ಆರಂಭದ ಮುನ್ಸೂಚನೆಯನ್ನು ನೀಡುತ್ತಿವೆ. ಜತೆಗೆ ತಾಲೂಕಿನ ಜೀವನದಿಗಳಾದ ಮಲಪ್ರಭಾ, ಮಹದಾಯಿ, ಪಾಂಡರಿ, ಮಾರ್ಕಂಡೇಯ ಹಾಗೂ ನದಿಗಳಿಗೆ ಜೀವಸೆಲೆ ಒದಗಿಸುವ ಕೋಟ್ನಿ, ಬೈಲ್‌, ಪಣಸೂರಿ, ಮಂಗೇತ್ರಿ, ಅಲಾತ್ರಿ ಮತ್ತಿತರ ಹಳ್ಳಗಳು ನಿಧಾನವಾಗಿ ಜೀವಕಳೆಯನ್ನು ಪಡೆದುಕೊಳ್ಳುತ್ತಿವೆ.

ಗೋವಾ ರಾಜಧಾನಿ ಪಣಜಿಯಿಂದ ಚೋರ್ಲಾ ಮತ್ತು ಅನಮೋಡ ಮಾರ್ಗವಾಗಿ ಬೆಳಗಾವಿಯತ್ತ ಸಾಗುವ ಹೆದ್ದಾರಿಯ ಇಕ್ಕೆಲಗಳಲ್ಲಿ ಕಾಣುವ ಗಗನವನ್ನು ಚುಂಬಿಸುವ ಮೋಡಗಳ ದೃಶ್ಯ ನೋಡುಗರ ಕಣ್ಣಿಗೆ ಹಬ್ಬವಾದಂತಾಗಿದೆ. ವರ್ಷದ ಕೆಲವೇ ತಿಂಗಳುಗಳ ಕಾಲ ಕಾಣಸಿಗುವ ಈ ನೈಸರ್ಗಿಕ ಹಾಗೂ ನಯನಮನೋಹರ ದೃಶ್ಯಗಳನ್ನು ತಮ್ಮ ಕಣ್ಣುಗಳಲ್ಲಿ ತುಂಬಿಸಿಕೊಳ್ಳಲು ಚಾರಣಿಗರು ತಾಲೂಕಿನ ಅರಣ್ಯಪ್ರದೇಶದತ್ತ ಹೆಜ್ಜೆಹಾಕುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ