ಆ್ಯಪ್ನಗರ

ಅತ್ಯಾಚಾರ ಪ್ರಕರಣದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ಖಾನಾಪುರ: ತಾಲೂಕಿನ ಗ್ರಾಮವೊಂದರ ಬಾಲಕಿ ...

Vijaya Karnataka 5 Jan 2020, 5:00 am
ಖಾನಾಪುರ: ತಾಲೂಕಿನ ಗ್ರಾಮವೊಂದರ ಬಾಲಕಿ ಮೇಲೆ ಈಚೆಗೆ ಅತ್ಯಾಚಾರ ಮಾಡಿದ ಕುರಿತು ನಂದಗಡ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ಕೈಗೊಂಡಿದ್ದಾರೆ.
Vijaya Karnataka Web the police registered a sue motto complaint of rape
ಅತ್ಯಾಚಾರ ಪ್ರಕರಣದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು


''ಪ್ರೌಢಶಾಲೆಯೊಂದರಲ್ಲಿವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿದ್ದ. ಈ ವಿಷಯ ಗ್ರಾಮಸ್ಥರಿಗೆ ತಿಳಿದದ್ದು ಗಮನ ಬಂದ ಬಳಿಕ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅತ್ಯಾಚಾರ ಪ್ರಕರಣದ ದೂರು ದಾಖಲಿಸಲು ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಬೆದರಿಕೆ ಹಾಕಲಾಗಿತ್ತು ಎನ್ನುವ ಆರೋಪದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ'' ಎಂದು ಸಿಪಿಐ ಮೋತಿಲಾಲ್‌ ಪವಾರ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿ ಪರವೀನ್‌ ಶೇಖ್‌ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ