ಆ್ಯಪ್ನಗರ

ಶಾಂತವಾದ ಕೃಷ್ಣಾ ನದಿ ತೀರ; ಕುಡಚಿ ಸೇತುವೆ ಸಂಚಾರಕ್ಕೆಮುಕ್ತ

ಚಿಕ್ಕೋಡಿ: ಮಹಾರಾಷ್ಟ್ರದಿಂದ ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಗಳಿಗೆ ಹರಿದು ಬರುವ ...

Vijaya Karnataka 14 Sep 2019, 5:00 am
ಚಿಕ್ಕೋಡಿ: ಮಹಾರಾಷ್ಟ್ರದಿಂದ ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಗಳಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಶುಕ್ರವಾರ ಈ ಎಲ್ಲನದಿಗಳ ನೀರಿನ ಮಟ್ಟ ಮತ್ತಷ್ಟು ಇಳಿದಿದ್ದು ನದಿ ತೀರದ ಜನರಲ್ಲಿಮಂದಹಾಸ ಮೂಡಿದೆ.
Vijaya Karnataka Web 13CKD4_53


ಮಹಾರಾಷ್ಟ್ರದಿಂದ ವೇದಗಂಗಾ ಮತ್ತು ದೂಧಗಂಗಾ ನದಿಗಳ ಮೂಲಕ 19,360 ಕ್ಯುಸೆಕ್‌ ಮತ್ತು ರಾಜಾಪುರ ಬ್ಯಾರೇಜ್‌ ಮೂಲಕ 1,21,000 ಕ್ಯುಸೆಕ್‌ ಸೇರಿ ಒಟ್ಟು 1,40,360 ಕ್ಯುಸೆಕ್‌ ನೀರು ಕೃಷ್ಣಾ ನದಿಗೆ ಕಲ್ಲೋಳ ಬಳಿ ಹರಿದು ಬರುತ್ತಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ನಿಂದ 16,3000 ಕ್ಯುಸೆಕ್‌ ನೀರು ಬಿಡುಗಡೆ ಮಾಡಲಾಗುತ್ತಿದೆ. ಆಲಮಟ್ಟಿ ಡ್ಯಾಮನಿಂದ 2,09,000 ಕ್ಯುಸೆಕ್‌ ನೀರು ಬಿಡುಗಡೆ ಮಾಡಲಾಗುತ್ತಿದೆ.

ಕುಡಚಿ ಸೇತುವೆ, ಚಿಂಚಲಿ-ರಾಯಬಾಗಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಶುಕ್ರವಾರ ಸಂಚಾರಕ್ಕೆ ಮುಕ್ತವಾಗಿವೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿಜಲಾವೃತ್ತಗೊಂಡಿರುವ ಎಲ್ಲಸೇತುವೆಗಳು ಹಾಗೂ ರಸ್ತೆಗಳು ಶನಿವಾರ ಸಂಜೆಯವರೆಗೆ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ