ಆ್ಯಪ್ನಗರ

ಎರಡನೇ ದಿನ ನೀರಸ

ಬೆಳಗಾವಿ : ಕೇಂದ್ರ ಸರಕಾರದ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ 2ನೇ ದಿನವಾದ ಬುಧವಾರ ...

Vijaya Karnataka 10 Jan 2019, 5:00 am
ಬೆಳಗಾವಿ : ಕೇಂದ್ರ ಸರಕಾರದ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌ಗೆ 2ನೇ ದಿನವಾದ ಬುಧವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಎಂದಿನಂತೆ ಬಸ್‌ ಸಂಚಾರ ಇತ್ತು. ಶಾಲೆ-ಕಾಲೇಜುಗಳು, ಅಂಗಟ್ಟು ಮುಂಗಟ್ಟುಗಳು ಕಾರ್ಯನಿರ್ವಹಿಸಿದವು.
Vijaya Karnataka Web BEL-9 LBS 6A


ನಗರದ ಗೋಗಟೆ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಎಲ್‌ಐಸಿ, ಬ್ಯಾಂಕ್‌ ನೌಕರರು, ಬಿಸಿಯೂಟ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ಅಂಚೆ ಕಚೇರಿ ಸಿಬ್ಬಂದಿ ನಗರ ಕೇಂದ್ರ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮುಂಜಾಗ್ರತ ಕ್ರಮವಾಗಿ ಬಸ್‌ ನಿಲ್ದಾಣ, ಚನ್ನಮ್ಮ ವೃತ್ತ, ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಹಲವೆಡೆ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ