ಆ್ಯಪ್ನಗರ

ಏರುತ್ತಲೇ ಇದೆ ನದಿಗಳ ನೀರಿನ ಮಟ್ಟ

ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ವರುಣನ ಆರ್ಭಟ ...

Vijaya Karnataka 8 Sep 2019, 5:00 am
ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇರುವುದರಿಂದ ನದಿ ತೀರದ ಜನರ ಮತ್ತಷ್ಟು ಆತಂಕಿತರಾಗಿದ್ದಾರೆ.
Vijaya Karnataka Web the water level of rivers increasing
ಏರುತ್ತಲೇ ಇದೆ ನದಿಗಳ ನೀರಿನ ಮಟ್ಟ


ಮಹಾರಾಷ್ಟ್ರದ ನಾನಾ ಜಲಾಶಯಗಳಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಡುತ್ತಿರುವುದರಿಂದ ಕಲ್ಲೋಳ ಬಳಿ 1.50 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರು ಹರಿದು ಬರುತ್ತಿದೆ. ಸದ್ಯ ನದಿ ನೀರಿನ ಮಟ್ಟ ಕಾಯ್ದುಕೊಂಡಿದ್ದರೂ ಭಾನುವಾರದ ವೇಳೆಗೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ನೀರಾವರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಿಕ್ಕೋಡಿ ತಾಲೂಕಿನ ಕೆಳಹಂತದ ಕಲ್ಲೋಳ-ಯಡೂರ, ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಜತ್ರಾಟ-ಭಿವಶಿ, ಮಲಿಕವಾಡ-ದತ್ತವಾಡ ಸೇತುವೆಗಳ ಜತೆಗೆ ಅಕ್ಕೋಳ-ಸಿದ್ನಾಳ ಸೇತುವೆ ಕೂಡ ಮುಳುಗಿದೆ.

ನದಿ ತೀರಕ್ಕೆ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ, ತಹಸೀಲ್ದಾರ್‌ ಡಾ. ಸಂತೋಷ ಬಿರಾದಾರ ಅವರು ಭೇಟಿ ನೀಡಿ ಸ್ಥಿತಿಗತಿಗಳ ಮಾಹಿತಿ ಪಡೆದಿದ್ದಾರೆ. ಪ್ರವಾಹ ಪರಿಸ್ಥಿತಿ ಉಂಟಾದರೆ ಜನ, ಜಾನುವಾರುಗಳ ರಕ್ಷಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ