ಆ್ಯಪ್ನಗರ

ಹೆಚ್ಚಿನ ಪರಿಹಾರ ನೀಡುವಂತೆ ರಾಜ್ಯ ಸರಕಾರಕ್ಕೆ ಒತ್ತಾಯ

ದೊಡವಾಡ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ...

Vijaya Karnataka 13 Aug 2019, 5:00 am
ದೊಡವಾಡ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಮನೆ ಕುಸಿದು ಬಿದ್ದು ನಿರಾಶ್ರಿತರಾಗಿರುವ ಬೈಲಹೊಂಗಲ ಮತಕ್ಷೇತ್ರದ ದೊಡವಾಡ ಹಾಗೂ ಸಂಗ್ರೇಶಕೊಪ್ಪ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
Vijaya Karnataka Web BEL-12 DWDP 2


ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮುಖ್ಯಮಂತ್ರಿ ಯಡಿಯೂರಪ್ಪನವರು 40 ಸಾವಿರ ಕೋಟಿಯಷ್ಟು ಹಾನಿಯಾಗಿದೆ ಎಂದು ಹೇಳಿದ್ದಾರೆ. ಆ 40 ಸಾವಿರ ಕೋಟಿ ಹಣವನ್ನು ಕೇಂದ್ರ ಸರಕಾರದಿಂದ ತಂದು ಪ್ರವಾಹ ಪೀಡಿತ ಜನರಿಗೆ ನೆರವಾದರೆ ಬಹಳ ಸಂತೋಷ'', ಎಂದರು.

ಮಾಜಿ ಸಚಿವ ವಿನಯ್‌ ಕುಲಕರ್ಣಿ, ಶಾಸಕ ಮಹಾಂತೇಶ ಕೌಜಲಗಿ, ಡಾ.ವಿ.ಎಸ್‌.ಸಾಧುನವರ, ಬಸವರಾಜ ಕೌಜಲಗಿ, ಮಹಾಂತೇಶ ಮತ್ತಿಕೊಪ್ಪ, ಜಿಪಂ ಸದಸ್ಯ ಅನಿಲ ಮ್ಯಾಕಲಮರಡಿ ಡಿಕೆಶಿಯವರಿಗೆ ಸಾಥ್‌ ನೀಡಿದರು. ದೊಡವಾಡ ಗ್ರಾಮದ ಕೊಪ್ಪದ ಅಗಸಿಯಲ್ಲಿ ಮಹಾಂತೇಶ ಕೌಜಲಗಿ, ತಾಪಂ ಇಒ ಸಮೀರ ಮುಲ್ಲಾ, ತಹಸೀಲ್ದಾರ ಡಾ.ದೊಡ್ಡಪ್ಪ ಹೂಗಾರ ಅವರ ಜತೆ ಸಂಕಷ್ಟಕ್ಕೊಳಗಾದ ಜನರಿಗೆ ತುರ್ತು ಪರಿಹಾರ ಒದಗಿಸುವ ಕುರಿತು ಡಿಕೆಶಿ ಕೆಲ ಕಾಲ ಚರ್ಚೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ