ಆ್ಯಪ್ನಗರ

ಬಿಸಿಎಂ ಹಾಸ್ಟೆಲ್‌ಗೆ ತಾಲೂಕು ಅಧಿಕಾರಿ ಭೇಟಿ, ಪರಿಶೀಲನೆ

ಮೋಳೆ: ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ತಾಲೂಕು ಅಧಿಕಾರಿ ಜಿಡಿ...

Vijaya Karnataka 12 Jun 2019, 5:00 am
Vijaya Karnataka Web BEL-11 MOLE-1 PHOTO
ಮೋಳೆ : ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ತಾಲೂಕು ಅಧಿಕಾರಿ ಜಿ.ಡಿ. ಗುಂಡ್ಲುರ ಅವರು ನಿಲಯದ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, 'ಉತ್ತಮ ಸೌಲಭ್ಯಗಳನ್ನು ಹೊಂದಿರುವ ಗ್ರಾಮದ ವಸತಿ ನಿಲಯಕ್ಕೆ 2019-20ನೇ ಸಾಲಿನಲ್ಲಿ ಪ್ರವೇಶ ಬಯಸಿ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸೀಮಿತ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿರುವುದರಿಂದ ಅರ್ಹ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ' ಎಂದರು.

'ಬೇಸಿಗೆಯಲ್ಲಿ ವಸತಿ ನಿಲಯಕ್ಕೆ ನೀರಿನ ತೊಂದರೆಯಾಗಿದೆ. ಸ್ಥಳೀಯ ಗ್ರಾಪಂಗೆ ನೀರು ಪೂರೈಕೆಗಾಗಿ ಮನವಿ ಮಾಡಲಾಗಿದೆ' ಎಂದು ತಿಳಿಸಿದ ಅವರು, ನಿಲಯದ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ಸೌಮ್ಯವಾಗಿ ವರ್ತಿಸಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಗಮನಹಿರಿಸಿ ಮಕ್ಕಳಿಗೆ ಉತ್ತಮ ಆಹಾರ ಒದಗಿಸಬೇಕು. ಒಂದು ವೇಳೆ ಅಶಿಸ್ತು ಕಂಡು ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ನಿಲಯದ ಮೇಲ್ವಿಚಾರಕ ಆಶೋಕ ಸತ್ತಿಗೌಡರ ಹಾಗೂ ಸಿಬ್ಬಂದಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ