ಆ್ಯಪ್ನಗರ

ಚಿಕಿತ್ಸೆ ಫಲಿಸದೆ ಯುವಕ ಸಾವು; ಡೆಂಗೆ ಶಂಕೆ

ಅನಾರೋಗ್ಯದಿಂದ ಬಳಲುತ್ತಿದ್ದ ತಾಲೂಕಿನ ಅಗಸಗಾ ಗ್ರಾಮದ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದು, ಡೆಂಗೆಯಿಂದ ಸಾವಿಗೀಡಾಗಿರಬಹುದು ಎಂದು ಶಂಕಿಸಲಾಗಿದೆ...

Vijaya Karnataka 7 Oct 2018, 5:00 am
ಬೆಳಗಾವಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಲೂಕಿನ ಅಗಸಗಾ ಗ್ರಾಮದ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದು, ಡೆಂಗೆಯಿಂದ ಸಾವಿಗೀಡಾಗಿರಬಹುದು ಎಂದು ಶಂಕಿಸಲಾಗಿದೆ. ಸಾಗರ ವೈಜು ಹುಕ್ಕೇರಿ (19) ಮೃತರು. ಸಾಗರ ಹುಕ್ಕೇರಿಗೆ ಎಂಟು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ''ಡೆಂಗೆಯಿಂದಲೇ ಸಾವು ಸಂಭವಿಸಿದೆ ಎಂಬುದರ ಕುರಿತು ಖಾಸಗಿ ಆಸ್ಪತ್ರೆಯಿಂದ ವರದಿ ಬಂದಿಲ್ಲ'', ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಗಸಗಾ ಗ್ರಾಮದಲ್ಲಿ ದಿನದಿಂದ ದಿನಕ್ಕೆ ನೈರ್ಮಲ್ಯ ಸಮಸ್ಯೆ ಹೆಚ್ಚುತ್ತಿದೆ. ಗಟಾರ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುತ್ತಿದ್ದು ಸೊಳ್ಳೆಗಳ ಹಾವಳಿ ವಿಪರೀತವಾಗಿದೆ. ಗ್ರಾಮದಲ್ಲಿ ದುರ್ವಾಸನೆ ಬೀರುತ್ತಿದ್ದರೂ ಗ್ರಾಮ ಪಂಚಾಯಿತಿಯಿಂದ ಸ್ವಚ್ಛತೆ ಕೆಲಸ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
Vijaya Karnataka Web young man dies non responding to treatment dengue suspected
ಚಿಕಿತ್ಸೆ ಫಲಿಸದೆ ಯುವಕ ಸಾವು; ಡೆಂಗೆ ಶಂಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ