ಆ್ಯಪ್ನಗರ

ಗಾಂಧೀಜಿ ಪ್ರತಿಮೆಗೆ ಅವಮಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಅಪಮಾನಗೊಳಿಸಿದ್ದು, ಈ ಕುರಿತು ಪಟ್ಟಣ ಠಾಣೆಯಲ್ಲಿ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಕ ಸುದ್ದಿಲೋಕ 5 Aug 2016, 7:07 am
ಹೊಸಪೇಟೆ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಅಪಮಾನಗೊಳಿಸಿದ್ದು, ಈ ಕುರಿತು ಪಟ್ಟಣ ಠಾಣೆಯಲ್ಲಿ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Vijaya Karnataka Web
ಗಾಂಧೀಜಿ ಪ್ರತಿಮೆಗೆ ಅವಮಾನ


ನಗರದ ಹೃದಯ ಭಾಗದಲ್ಲಿರುವ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಜು.3ರ ತಡರಾತ್ರಿ ಪಾದರಕ್ಷೆಗಳನ್ನು ತೊಡಿಸಿ ಅಪಮಾನಗೊಳಿಸಿದ್ದಾರೆ. ಇದನ್ನು ಕಂಡ ಸಾರ್ವಜನಿಕರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಅಪಮಾನಕರ ಹಾರವನ್ನು ತೆಗೆಸಿದ್ದಾರೆ.

ರಕ್ಷಣೆ ಇಲ್ಲ: ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ರಕ್ಷಣೆ ಇಲ್ಲದಂತಾಗಿದೆ. ಈ ಹಿಂದೆ ರಾಷ್ಟ್ರಪಿತನ ಕೈಯಲ್ಲಿದ್ದ ಕೋಲನ್ನು ಕಿಡಿಗೇಡಿಗಳು ಕದ್ದೊಯ್ದಿದ್ದರು. ಪ್ರತಿಮೆಗೆ ರಕ್ಷಣೆ ಇಲ್ಲದಂತಾಗಿದೆ. ಪ್ರತಿಮೆಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
----

ಮಹಾತ್ಮ ಗಾಂಧೀಜಿ ಪ್ರತಿಮೆಗೆ ಕಿಡಿಗೇಡಿಗಳು ಅಪಮಾನಗೊಳಿಸಿದ್ದಾರೆ. ಈ ಕುರಿತು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ.

-ಹೊನವಾಡ್ಕರ್, ಪ್ರಭಾರಿ ಡಿವೈಎಸ್ಪಿ, ಹೊಸಪೇಟೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ