ಆ್ಯಪ್ನಗರ

ಪುರಸಭೆ ಚುನಾವಣೆಯಲ್ಲಿ ಗೆಲುವಿನ ನಾಗಾಲೋಟ

ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿದ ಕಾಂಗ್ರೆಸ್‌ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದಿದೆ. ಒಟ್ಟು 23 ವಾರ್ಡ್‌ಗಳಲ್ಲಿ 19ನೇ ವಾರ್ಡ್‌ನ ಕಾಂಗ್ರೆಸ್‌ ಅಭ್ಯರ್ಥಿ ಸುರೇಶ ಐಗೋಳ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕೈ ಖಾತೆಯನ್ನು ಆರಂಭಿಸಿದ್ದರು.

Vijaya Karnataka 1 Jun 2019, 5:00 am
ಹೂವಿನಹಡಗಲಿ: ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿದ ಕಾಂಗ್ರೆಸ್‌ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದಿದೆ. ಒಟ್ಟು 23 ವಾರ್ಡ್‌ಗಳಲ್ಲಿ 19ನೇ ವಾರ್ಡ್‌ನ ಕಾಂಗ್ರೆಸ್‌ ಅಭ್ಯರ್ಥಿ ಸುರೇಶ ಐಗೋಳ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕೈ ಖಾತೆಯನ್ನು ಆರಂಭಿಸಿದ್ದರು. ಬಳಿಕ 22ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ 13ರಲ್ಲಿ ಕಾಂಗ್ರೆಸ್‌,9ರಲ್ಲಿ ಬಿಜೆಪಿ ವಿಜಯ ಸಾಧಿಸಿವೆ. ಆ ಮೂಲಕ 23ವಾರ್ಡ್‌ಗಳಲ್ಲಿ 14 ಸ್ಥಾನ ಗೆದ್ದು ಬೀಗುತ್ತಿರುವ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ. 9ವಾರ್ಡ್‌ಗಳಿಗೆ ತೃಪ್ತಿಪಟ್ಟುಕೊಂಡಿರುವ ಬಿಜೆಪಿ ಪ್ರಬಲ ಪ್ರತಿಪಕ್ಷ ವಾಗಲಿದೆ.
Vijaya Karnataka Web  huvinahadagli municipal elections congress win
ಪುರಸಭೆ ಚುನಾವಣೆಯಲ್ಲಿ ಗೆಲುವಿನ ನಾಗಾಲೋಟ


ಕಳೆದ ಬಾರಿ ಕೇವಲ 2 ಸ್ಥಾನಗಳಿಸಿದ್ದ ಬಿಜೆಪಿ ಈ ಬಾರಿ 9 ಸ್ಥಾನಗಳಿಸುವ ಮೂಲಕ ಪುರಸಭೆಯಲ್ಲಿ ಮೊದಲ ಬಾರಿಗೆ ಪ್ರಬಲ ಪ್ರತಿಪಕ್ಷ ವಾಗಿ ಹೊರಹೊಮ್ಮಿದೆ. ಆ ಮೂಲಕ ಪರೋಕ್ಷ ವಾಗಿ ಆ ಮೂಲಕ ಪರೋಕ್ಷ ವಾಗಿ ಆಡಳಿತ ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯನ್ನೂ ಬಾರಿಸಿದೆ. ಗೆಲುವಿನ ನಗೆ ಬೀರಿದ ಎಲ್ಲ ಅಭ್ಯರ್ಥಿಗಳು ಪರಸ್ಪರ ಬಣ್ಣ ಎರಚಿಕೊಂಡು, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು. ಅತ್ತ ನರೇಂದ್ರ ಮೋದಿ ಪ್ರಧಾನಿ ಗದ್ದುಗೆ ಏರಿ ಗೆಲುವಿನ ಉತ್ಸಾಹದಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಕೆಲವೇ ಗಂಟೆಗಳಲ್ಲಿ ಸೋಲಿನ ಕಹಿ ಅನುಭವವಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ