ಆ್ಯಪ್ನಗರ

ಬಳ್ಳಾರಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವು: ಮಕ್ಕಳಿಗೆ ವಿಷ ಉಣಿಸಿ, ದಂಪತಿ ಆತ್ಮಹತ್ಯೆ

ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟ ದಂಪತಿಗಳು ಇಬ್ಬರು ಪುಟ್ಟ ಮಕ್ಕಳಿಗೆ ವಿಷ ಉಣಿಸಿ ತಾವೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Vijaya Karnataka Web 6 Jan 2021, 1:51 pm
ಬಳ್ಳಾರಿ: ಡೆತ್ ನೋಟ್ ಬರೆದಿಟ್ಟು ಮಕ್ಕಳಿಗಿಬ್ಬರಿಗೂ ವಿಷ ಉಣಿಸಿ ದಂಪತಿಗಳು ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
Vijaya Karnataka Web ಬಳ್ಳಾರಿಯಲ್ಲಿ ಆತ್ಮಹತ್ಯೆ


ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಜ.6ರಂದು ನಡೆದಿದೆ.

ಮಕ್ಕಳಿಗೆ ವಿಷವುಣಿಸಿ, ದಂಪತಿಗಳು ನೇಣಿಗೆ ಶರಣಾಗಿದ್ದು, ನಂಜುಂಡೇಶ್ವರ( 32), ಪತ್ನಿ ಪಾರ್ವತಿ, ಮಕ್ಕಳಾದ ಮೂರು ವರ್ಷದ ಗೌತಮಿ, 2 ವರ್ಷದ ಮಗ ಸ್ವರೂಪ್ ಮೃತ ದುರ್ದೈವಿಗಳು .

ನಂಜುಂಡೇಶ್ವರ ಜಿಂದಾಲ್ ಕಂಪನಿಯ ನೌಕರನಾಗಿದ್ದ. ದಂಪತಿಗಳು ಡೆತ್ ನೋಟ್ ಬರೆದಿಟ್ಟು, ಮಕ್ಕಳಿಗೆ ವಿಷವುಣಿಸಿ ಬಳಿಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾವಗಾದಿಗನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ ಉಪ ವಲಯ ಅರಣ್ಯಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ
ಉಪ ವಲಯ ಅರಣ್ಯಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಉಪ ವಲಯ ಅರಣ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಸವರಾಜ ವೀರಾಪೂರ( 31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಕಳೆದ ತಿಂಗಳಷ್ಟೆ ಮದುವೆಯಾಗಿದ್ದರು.

ಮೂಲತಹ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಮಾಪೂರ ಗ್ರಾಮದ ನಿವಾಸಿ. ಬಸವರಾಜ ವೀರಾಪೂರ ಅವರು ಕಳೆದ ತಿಂಗಳು ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ