ಆ್ಯಪ್ನಗರ

‘ಸವಾಲು ಸ್ವೀಕರಿಸಿ ಕ್ರೀಡಾಸ್ಪೂರ್ತಿ ಮೆರೆಯಿರಿ’

ನಮ್ಮ ದೇಶ ಜನಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಆದರೆ ಏಷ್ಯನ್‌ ಗೇಮ್ಸ್‌ನಲ್ಲಿ 9ನೇ ಸ್ಥಾನದಲ್ಲಿದ್ದೇವೆ. ದೇಶದ ಬಹಳಷ್ಟು ಕ್ರೀಡಾಪಟುಗಳು ಬಡತನದಿಂದ ಬಂದವರೇ, ಸವಾಲನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಯುವಕರು ಕ್ರೀಡೆಯಲ್ಲಿ ಭಾಗವಹಿಸಿ ದೇಶಕ್ಕೆ ಉತ್ತಮ ಹೆಸರು ತರಬೇಕು ಎಂದು ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು.

Vijaya Karnataka 26 Sep 2018, 5:00 am
ಬಳ್ಳಾರಿ ; ನಮ್ಮ ದೇಶ ಜನಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಆದರೆ ಏಷ್ಯನ್‌ ಗೇಮ್ಸ್‌ನಲ್ಲಿ 9ನೇ ಸ್ಥಾನದಲ್ಲಿದ್ದೇವೆ. ದೇಶದ ಬಹಳಷ್ಟು ಕ್ರೀಡಾಪಟುಗಳು ಬಡತನದಿಂದ ಬಂದವರೇ, ಸವಾಲನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಯುವಕರು ಕ್ರೀಡೆಯಲ್ಲಿ ಭಾಗವಹಿಸಿ ದೇಶಕ್ಕೆ ಉತ್ತಮ ಹೆಸರು ತರಬೇಕು ಎಂದು ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು.
Vijaya Karnataka Web accept the challenge and respect them
‘ಸವಾಲು ಸ್ವೀಕರಿಸಿ ಕ್ರೀಡಾಸ್ಪೂರ್ತಿ ಮೆರೆಯಿರಿ’


ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಪದವೀ ಪೂರ್ವ ಶಿಕ್ಷ ಣ ಇಲಾಖೆ, ಬಿಪಿಎಸ್‌ಸಿ ಪದವೀ ಪೂರ್ವ ಕಾಲೇಜು ಜಂಟಿಯಾಗಿ ಏರ್ಪಡಿಸಿದ್ದ, ತಾಲೂಕು ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿದ್ಯಾಭ್ಯಾಸವಲ್ಲದೇ ಕ್ರೀಡೆಯಲ್ಲಿಯೂ ಭಾಗವಹಿಸಬೇಕು. ತಾಲೂಕಿನಲ್ಲಿ 40 ಪದವೀ ಪೂರ್ವ ಕಾಲೇಜಿನಲ್ಲಿ ಕೇವಲ 14 ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಈ ಸಂಖ್ಯೆ ಹೆಚ್ಚಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಮಾತನಾಡಿದರು. ಮಹಾನಗರಪಾಲಿಕೆಯ ಮಹಾಪೌರರಾದ ಆರ್‌.ಸುಶೀಲಾಬಾಯಿ, ಪದವೀ ಪೂರ್ವ ಶಿಕ್ಷ ಣ ಇಲಾಖೆಯ ಉಪನಿರ್ದೇಶಕ ಕೆ.ತಿಮ್ಮಪ್ಪ ಮಾತನಾಡಿದರು. ಬಸವರಾಜೇಶ್ವರಿ ಪಬ್ಲಿಕ್‌ ಸೂಲ್ಕ್‌ ಮತ್ತು ಕಾಲೇಜಿನ ಪ್ರಾಚಾರ್ಯ ಹರಿಕುಮಾರ್‌, ಮಾಜಿ ಮೇಯರ್‌ ನಾಗಮ್ಮ, ಪಾಲಿಕೆ ಸದಸ್ಯ ಶ್ರೀನಿವಾಸ ಮೋತ್ಕರ್‌, ನಿವೃತ್ತ ದೈಹಿಕ ಶಿಕ್ಷ ಣಾಧಿಕಾರಿ ರಾಮಾಂಜಿನೇಯ, ಬಸವರಾಜೇಶ್ವರಿ ಪಬ್ಲಿಕ್‌ ಸೂಲ್ಕ್‌ ಮತ್ತು ಕಾಲೇಜಿನ ಸಂಸ್ಥಾಪಕ ಅಶೋಕ್‌ ಭೂಪಾಲ್‌, ಪ್ರಾಚಾರ್ಯ ಪ್ರಸಾದ್‌ ರೆಡ್ಡಿ, ಹನುಮಂತ ರೆಡ್ಡಿ ಇನ್ನಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ