ಆ್ಯಪ್ನಗರ

ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ಧಿ ಸಂಸ್ಥೆಯಿಂದ ನಗರದ ಹಂದ್ರಾಳ್‌ ಪ್ರದೇಶದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಆಚರಿಸಲಾಯಿತು.

Vijaya Karnataka 27 Jun 2018, 5:00 am
ಬಳ್ಳಾರಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ಧಿ ಸಂಸ್ಥೆಯಿಂದ ನಗರದ ಹಂದ್ರಾಳ್‌ ಪ್ರದೇಶದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಆಚರಿಸಲಾಯಿತು.
Vijaya Karnataka Web BLR-BLY26GK2


ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಜನಾರ್ದನರೆಡ್ಡಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆಗೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು. ಮಾದಕ ವ್ಯಸನಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಅರಿವು ಮೂಡಿಸಬೇಕು ಎಂದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ದುರುಗಪ್ಪ, ಸಾಮಾಜಿಕ ಕಾರ್ಯಕರ್ತರಾದ ಭೋಜರಾಜ, ಮಹೇಶ, ಕಾವ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ಧಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ಎಂ.ಆರ್‌.ನಿರಂಜನ, ಶಾಲೆಯ ಶಿಕ್ಷಕರಾದ ರತ್ನದೇವಿ, ಚಂದ್ರಿಕಾ, ಸಣ್ಣ ವೀರಮ್ಮ, ಒಕ್ಕೂಟದ ಪದಾಧಿಕಾರಿಗಳಾದ ಭಾರತಿ, ನೀಲಮ್ಮ, ಸುಬ್ಬಲಕ್ಷ್ಮಿ, ಸುಮಂಗಳಮ್ಮ, ಸೇವಾ ಪ್ರತಿನಿಧಿಗಳಾದ ವೇದಾವತಿ, ಉಮಾದೇವಿ, ಕೃಷಿ ಮೇಲ್ವಿಚಾರಕ ಶಂಕರಯ್ಯ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ