ಆ್ಯಪ್ನಗರ

ಬಳ್ಳಾರಿ ವಿಭಜನೆ ವಿರುದ್ಧ ಮತ್ತೆ ಧ್ವನಿ ಎತ್ತಿದ ಸೋಮಶೇಖರ ರೆಡ್ಡಿ

ಬಳ್ಳಾರಿ ಜಿಲ್ಲೆ ಇಬ್ಭಾಗ ಮಾಡಿ ವಿಜಯನಗರ ಜಿಲ್ಲಾ ರಚನೆಗೆ ರಾಜ್ಯ ಬಿಜೆಪಿ ಸರಕಾರ ಮುಂದಾಗಿದೆ. ಇದು ಬಳ್ಳಾರಿ ಗಣಿಧಣಿಗಳನ್ನು ತೀವ್ರ ಆಕ್ರೋಶಕ್ಕೆ ಗುರಿ ಮಾಡಿದೆ. ಗಣಿಧಣಿಗಳು ಸಿಎಂ ವಿರುದ್ಧ ಪರೋಕ್ಷವಾಗಿ ಮುನಿಸಿಕೊಂಡಿದ್ದಾರೆ.

Vijaya Karnataka Web 28 Sep 2019, 10:40 am
ಬಳ್ಳಾರಿ: ಜಿಲ್ಲೆಯನ್ನು ಇಬ್ಭಾಗ ಮಾಡಿ ವಿಜಯನಗರ ಜಿಲ್ಲೆಯನ್ನು ಪ್ರತ್ಯೇಕವಾಗಿ ರಚಿಸುವ ಪ್ರಸ್ತಾವಕ್ಕೆ ಶಾಸಕ ಸೋಮಶೇಖರ್ ರೆಡ್ಡಿ ಮತ್ತೊಮ್ಮೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
Vijaya Karnataka Web Somashekar Readdy


ವಿಜಯನಗರ ಜಿಲ್ಲೆ ಆಗಬೇಕೆಂದು ಆನಂದ್ ಸಿಂಗ್ ಒಬ್ಬರು ರಾಜೀನಾಮೆ ಕೊಟ್ಟಿದ್ದಾರೆ ಅಂತ ಹಾಗೆ ಮಾಡೋಕೆ ಹೋಗುವುದು ಸರಿಯಲ್ಲ. ಇಬ್ಭಾಗಕ್ಕೆ ವಿರೋಧಿಸಿ ನಾವು ಜಿಲ್ಲೆಯ ನಾಲ್ಕು ಜನ ಬಿಜೆಪಿ ಶಾಸಕರು ರಾಜೀನಾಮೆ ಕೊಟ್ಟರೆ? ಎಂದು ಅವರು ಪ್ರಶ್ನೆ ಮಾಡಿದರು.

ಬಳ್ಳಾರಿ ರಿಪಬ್ಲಿಕ್‌ ಇಬ್ಭಾಗಕ್ಕೆ ಗಣಿಧಣಿಗಳ ತೀವ್ರ ವಿರೋಧ: ಬಿಎಸ್‌ವೈಗೆ ಮತ್ತೊಂದು ಸಂಕಷ್ಟ

ಆನಂದ್ ಸಿಂಗ್ ರಾಜೀನಾಮೆಗೆ ನೀಡಿದ್ದಕ್ಕೆ, ಸರಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನ ಕರೆದು ಸಿಎಂ ಬಿಎಸ್ ವೈ ಚರ್ಚೆ ನಡೆಸಬೇಕು. ಈಗಾಗಲೇ ಸಿಎಂಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದವರು ಒತ್ತಾಯಿಸಿದ್ದಾರೆ.

ಒಬ್ಬರ ಸ್ವಾರ್ಥಕ್ಕಾಗಿ ಬಳ್ಳಾರಿ ಇಬ್ಭಾಗ ಮಾಡಿ ವಿಜಯನಗರ ಜಿಲ್ಲೆ ಸ್ಥಾಪನೆ: ಸೋಮಶೇಖರ್‌ ರೆಡ್ಡಿ ಕಿಡಿ

ನವೆಂಬರ್ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಜೊತೆ ಈ ಸಂಬಂಧ ಚರ್ಚೆ ನಡೆಸುತ್ತೇವೆ. ಈ ಹಿಂದೆ ಹಂಪಿ ಉತ್ಸವ ಆಚರಣೆ ಗಾಗಿ ಪ್ರತಿಭಟನೆ ನಡೆಸಿದ್ದೆವು. ಈಗಲೂ ಹಂಪಿ ಉತ್ಸವ ಆಚರಣೆ ಮಾಡದಿದ್ರೆ ಹೋರಾಟ ಮಾಡುತ್ತೇವೆ, ಎಂದವರು ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರ್ಪಡೆ ವಿಚಾರ ಹಾಗೂ ಯಡಿಯೂರಪ್ಪ ಮೂಲೆಗುಂಪು ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ರೆಡ್ಡಿ ಈ ಹಿಂದೆ ಕೂಡ ಜಿಲ್ಲೆಯ ವಿಭಜನೆಗೆ ವಿರೋಧ ವ್ಯಕ್ತ ಪಡಿಸಿದ್ದರು. ಶ್ರೀರಾಮುಲು ಕೂಡ ಅವರ ಜತೆ ದನಿಗೂಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ