ಆ್ಯಪ್ನಗರ

ರುದ್ರಭೂಮಿ ಅಗೆದು ಮರಳು ದೋಚಿದರು

ತಾಲೂಕಿನ ಕಂಚೀಕೆರೆ ಗ್ರಾಮದ ಕೆರೆಗೆ ಹೊಂದಿಕೊಂಡಿರುವ ಸ್ಮಶಾನದಲ್ಲಿ ಅಕ್ರಮ ಮರಳು ಸಾಗಣೆ ಮಾಡಿದ 9 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Vijaya Karnataka 31 Aug 2018, 12:11 pm
ಹರಪನಹಳ್ಳಿ: ತಾಲೂಕಿನ ಕಂಚೀಕೆರೆ ಗ್ರಾಮದ ಕೆರೆಗೆ ಹೊಂದಿಕೊಂಡಿರುವ ಸ್ಮಶಾನದಲ್ಲಿ ಅಕ್ರಮ ಮರಳು ಸಾಗಣೆ ಮಾಡಿದ 9 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Vijaya Karnataka Web Sand


ಕಂಚೀಕೆರೆ ಗ್ರಾಮದ ಕೆರೆಯ ಪಕ್ಕದ ಸ್ಮಶಾನದಲ್ಲಿ ಅಕ್ರಮವಾಗಿ ಮರಳು ತೆಗೆದ ಪರಿಣಾಮ ಅಸ್ಥಿಪಂಜರಗಳು ಎಲ್ಲೆಂದರಲ್ಲಿ ಹೊರ ಬಿದ್ದಿದ್ದವು. ಇದರಿಂದ ಭಯ ಭೀತಿಗೊಂಡ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ನೀಡಿದ್ದರು. ವಿಷಯ ತಿಳಿದ ತಹಸೀಲ್ದಾರ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಅಕ್ರಮ ಮರಳು ಜಪ್ತಿ ಮಾಡಿದ್ದರು.

ಮರಳು- ಮರುಳು
: ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಮರಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ವರದಿ ಕೈ ಸೇರಿದ್ದು, ಅದು ಮರಳು ಮಿಶ್ರಿತ ಮಣ್ಣಿನಿಂದ ಕೂಡಿದೆ. ಶೇ.30ರಷ್ಟು ಮರಳು ಸಹ ಅದರಲ್ಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಉಪವಿಭಾಗಾಧಿಕಾರಿ ಜಿ.ನಜ್ಮಾ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ