ಆ್ಯಪ್ನಗರ

ಚುನಾವಣಾಧಿಕಾರಿಗಳಿಂದ ಚೆಕ್‌ಪೋಸ್ಟ್‌ ಪರಿಶೀಲನೆ

ಬಳ್ಳಾರಿ ಲೋಕಸಭಾ ಉಪಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಾನಾ ಕಡೆ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲೆಯ ಚುನಾವಣಾಧಿಕಾರಿಗಳು ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Vijaya Karnataka 14 Oct 2018, 5:00 am
ಬಳ್ಳಾರಿ : ಬಳ್ಳಾರಿ ಲೋಕಸಭಾ ಉಪಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಾನಾ ಕಡೆ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲೆಯ ಚುನಾವಣಾಧಿಕಾರಿಗಳು ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Vijaya Karnataka Web BLR-13BLYPH11


ವಿಜಯನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ, ಹೊಸಪೇಟೆ ಸಹಾಯಕ ಆಯುಕ್ತ ಎನ್‌.ಲೋಕೇಶ ಬುಕ್ಕಸಾಗರ ಚೆಕ್‌ಪೋಸ್ಟ್‌ಗೆ ತೆರಳಿ, ಪೊಲೀಸ್‌ ಸಿಬ್ಬಂದಿ, ಅಬಕಾರಿ ಮತ್ತು ಸ್ಟ್ಯಾಟಿಕ್‌ ಸರ್ವೆಲೈನ್ಸ್‌ ತಂಡ ಕಾರ್ಯನಿರ್ವಹಿಸುತ್ತಿರುವುದನ್ನು ಪರಿಶೀಲಿಸಿದರು. ಸಿಸಿ ಕ್ಯಾಮೆರಾ ಕಾರ್ಯ ನಿರ್ವಹಣೆ ವೀಕ್ಷಿಸಿದರು. ಸಂಚರಿಸುತ್ತಿದ್ದ ವಾಹನಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸಿದ್ದು ಕಂಡುಬಂದಿತು.

ಬಳ್ಳಾರಿ ತಹಸೀಲ್ದಾರ್‌ ನಾಗರಾಜು, ಬಳ್ಳಾರಿ ನಗರ ಮತ್ತು ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ಸಿಂಧುವಾಳ ಚೆಕ್‌ಪೋಸ್ಟ್‌ ಸೇರಿದಂತೆ ನಾನಾ ಚೆಕ್‌ಪೋಸ್ಟ್‌ಗಳಿಗೆ ತೆರಳಿ ಪರಿಶೀಲಿಸಿದರು. ಅಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮೆರಾಗಳನ್ನು ವೀಕ್ಷಿಸಿದರು.ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ, ಚುನಾವಣಾ ಗೈಡ್‌ಲೈನ್ಸ್‌ ಅನುಸಾರ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಹಗರಿಬೊಮ್ಮನಳ್ಳಿ ತಹಸೀಲ್ದಾರ್‌ ವಿಜಯಕುಮಾರ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹರಾಳ ಚೆಕ್‌ಪೋಸ್ಟ್‌ ಸೇರಿದಂತೆ ನಾನಾ ಚೆಕ್‌ಪೋಸ್ಟ್‌ಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಎಸ್‌ಎಸ್‌ಟಿ, ಪೊಲೀಸ್‌ ಮತ್ತು ಅಬಕಾರಿ ಸಿಬ್ಬಂದಿ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ