ಆ್ಯಪ್ನಗರ

‘ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಕಳಂಕ’

ಪಟ್ಟಣದ ತಾಲೂಕು ಪಂಚಾಯಿತಿ ಮಲ್ಲಿಗೆ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

Vijaya Karnataka 14 Jun 2018, 5:00 am
ಹೂವಿನಹಡಗಲಿ : ಪಟ್ಟಣದ ತಾಲೂಕು ಪಂಚಾಯಿತಿ ಮಲ್ಲಿಗೆ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.
Vijaya Karnataka Web BLR-BLY13HDLP3


ಕಾರ್ಯಕ್ರಮಕ್ಕೆ ತಹಸೀಲ್ದಾರ್‌ ಮೇಘರಾಜ್‌ ನಾಯಕ್‌ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಅಂಟಿದ ಕಳಂಕ. ಬಡತನ, ನಿರುದ್ಯೋಗ ಇತರ ಕಾರಣಗಳಿಂದ ಸಮಾಜದಲ್ಲಿ ಈ ಪದ್ಧತಿ ಬೇರೂರಿದೆ. ಆದ್ದರಿಂದ ಸರಕಾರ ಬಡತನ ಹೋಗಲಾಡಿಸಲು ಆಹಾರ ಭದ್ರತೆ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಹತ್ತು ಯೋಜನೆಗಳನ್ನು ಜಾರಿಗೊಳಿಸಿದೆ. ಅಲ್ಲದೆ ಮಕ್ಕಳಿಗೆ ಉಚಿತ ಶಿಕ್ಷ ಣ, ಬಾಲ ಕಾರ್ಮಿಕರಿಗಾಗಿ ವಿಶೇಷ ಶಾಲೆ, ಕಡ್ಡಾಯ ಶಿಕ್ಷ ಣ ಸೇರಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದೆ. ಹಾಗಾಗಿ ಸಾರ್ವಜನಿಕರು ಈ ಪದ್ಧತಿ ವಿರುದ್ಧ ಧ್ವನಿ ಎತ್ತಬೇಕೆಂದು ಸಲಹೆ ನೀಡಿದರು. ಅಧ್ಯಕ್ಷ ತೆ ವಹಿಸಿದ್ದ ವಕೀಲರ ಸಂಘದ ಉಪಾಧ್ಯಕ್ಷ ಜಿ. ವಸಂತಕುಮಾರ, ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಹಲವು ಕಾಯಿದೆಗಳನ್ನು ಜಾರಿಗೊಳಿಸಿದೆ. ಈ ಪದ್ಧತಿಯನ್ನು ಬೆಂಬಲಿಸಿದರೆ ಅಥವಾ ಬಾಲ ಕಾರ್ಮಿಕರನ್ನು ಬಳಸಿಕೊಂಡವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಲಾಗುತ್ತಿದೆ. ಆದ್ದರಿಂದ ಸಮಾಜದ ಪ್ರತಿಯೊಬ್ಬರೂ ಈ ಪದ್ಧತಿ ವಿರುದ್ಧ ಆಂದೋಲನ ನಡೆಸಬೇಕೆಂದು ಮನವಿ ಮಾಡಿದರು. ತಾ.ಪಂ. ಇಒ ಸೋಮಶೇಖರ್‌,ಕ್ಷೇತ್ರ ಶಿಕ್ಷ ಣಾಧಿಕಾರಿ ಬಸವರಾಜ ಶಿಪಪುರ, ಸಿಡಿಪಿಒ ಕೃಷ್ಣನಾಯ್ಕ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಎಂ. ಜಯದೇವಯ್ಯ, ಕಾರ್ಮೆಲ್‌ ಜ್ಯೋತಿ ಎನ್‌ಜಿಒ ನಿರ್ದೇಶಕ ಡೆಂಜಿಲ್‌ ಮೊರಸ್‌ ಹಾಗೂ ಇತರರು ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ಲಾಲ್‌ಬಹದ್ದೂರ್‌ಶಾಸ್ತ್ರಿ ವೃತ್ತದವರೆಗೆ ಮಕ್ಕಳಿಂದ ಜಾಥಾ ನಡೆಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ