ಆ್ಯಪ್ನಗರ

ಡಿಕೆಶಿಗೆ ED ಸಮನ್ಸ್ ಮತ್ತು ಚಿದಂಬರಂ ಬಂಧನ ಖಂಡಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ರಾಜಕೀಯ ದುರುದ್ದೇಶದಿಂದ ಜಾರಿ ನಿರ್ದೇಶನಾಯಲ (ಇಡಿ) ಬಳಸಿಕೊಂಡು ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರಾದ ಡಿ.ಕೆ.ಶಿವಕುಮಾರ್‌ಗೆ ಸಮನ್ಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.

Vijaya Karnataka Web 30 Aug 2019, 2:32 pm
ಬಳ್ಳಾರಿ: ರಾಜಕೀಯ ದುರುದ್ದೇಶದಿಂದ ಜಾರಿ ನಿರ್ದೇಶನಾಯಲ (ಇಡಿ) ಉಪಯೋಗಿಸಿಕೊಂಡು ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರಾದ ಡಿ.ಕೆ.ಶಿವಕುಮಾರ್‌ಗೆ ಸಮನ್ಸ್ ಮತ್ತು ಚಿದಂಬರಂ ಬಂಧನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
Vijaya Karnataka Web bellary


ಕಾರ್ಯಕ್ತರು ನಗರದ ರಾಯಲ್ ವೃತ್ತದ ಬಳಿ ಟೈರ್ ಗೆ ಬೆಂಕಿ ಹಚ್ಚಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜೆಎಸ್ ಆಂಜನೇಯಲು, ಕಲ್ಲುಕಂಬ ಪಂಪಾಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಸುಂಡಿ ನಾಗರಾಜು ಉಪಸ್ಥಿತರಿದ್ದರು.

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ದಿಲ್ಲಿಯ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಡಿ ಕೆ ಶಿವಕುಮಾರ್ ಅವರಿಗೆ ಗುರುವಾರ ರಾತ್ರಿ 9.40 ಕ್ಕೆ ಇ.ಡಿ ಅಧಿಕಾರಿಗಳು ಸಮನ್ಸ್‌ ನೀಡಿದ್ದಾರೆ.

ವಿಚಾರಣೆಗೆ ಮುಗಿದ ಬಳಿಕ ಬಂಧನದ ಸಾಧ್ಯತೆ ಇರುರುವುದರಿಂದ ಮಧ್ಯಂತರ ರಕ್ಷಣೆ ನೀಡಬೇಕೆಂಬುದು ಅವರ ಪರ ವಕೀಲರ ಕೋರಿಕೆ. ಅದಕ್ಕೆ ಕೇಂದ್ರ ಸರಕಾರಿ ವಕೀಲರು ಆಕ್ಷೇಪ ವ್ಯಕ್ತ ಪಡಿಸಿದ್ದು, ಈ ಕುರಿತು ಇಡಿ ಮುಂದೆ ಮನವಿ ಸಲ್ಲಿಸಲು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ