ಆ್ಯಪ್ನಗರ

ಡಿ.ದೇವರಾಜು ಅರಸು ಜಯಂತಿ ಆಚರಣೆ

ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಲ್ಲಿ ಜಿಲ್ಲಾಡಳಿತದ ವತಿಯಿಂದ ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜು ಅರಸು ಜಯಂತಿಯನ್ನು ಸೋಮವಾರ ಆಚರಿಸಲಾಯಿತು.

Vijaya Karnataka 21 Aug 2018, 5:00 am
ಬಳ್ಳಾರಿ : ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಲ್ಲಿ ಜಿಲ್ಲಾಡಳಿತದ ವತಿಯಿಂದ ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜು ಅರಸು ಜಯಂತಿಯನ್ನು ಸೋಮವಾರ ಆಚರಿಸಲಾಯಿತು.
Vijaya Karnataka Web d devaraju arasu jayanti celebration
ಡಿ.ದೇವರಾಜು ಅರಸು ಜಯಂತಿ ಆಚರಣೆ


ಅಪರ ಜಿಲ್ಲಾಧಿಕಾರಿ ಎಸ್‌.ಜೆ.ಸೋಮಶೇಖರ್‌ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ. ಹಿಂದುಳಿದ ಸಮುದಾಯಗಳ ಏಳಿಗೆ ಉದ್ದೇಶಕ್ಕೆ ಜಾರಿ ಮಾಡಿದ ಹಲವು ಯೋಜನೆಗಳಿಂದಾಗಿ ಶೋಷಿತ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತನ್ನದೇ ಆದ ರೀತಿಯಲ್ಲಿ ಪ್ರಗತಿಪಥದತ್ತ ಸಾಗಲು ನೆರವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕೃಷ್ಣ, ಮುಖಂಡರಾದ ಕಲ್ಲುಕಂಭ ಪಂಪಾಪತಿ, ಕೆ.ಪಂಪಾಪತಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸುರೇಶ್‌ ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ