ಆ್ಯಪ್ನಗರ

ಕ್ರೀಡಾಪಟುಗಳ ಯಶಸ್ಸಿನಲ್ಲಿ ವೈದ್ಯರ ಪಾತ್ರ ಮುಖ್ಯ: ಶ್ರೀನಾಥ್ ಅರವಿಂದ್

ಪ್ರತಿಯೊಬ್ಬ ಕ್ರೀಡಾಪಟುವಿನ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಯಶಸ್ಸಿನಲ್ಲಿ ವೈದ್ಯರ ಪಾತ್ರ ಮುಖ್ಯವಾಗಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಶ್ರೀನಾಥ್ ಅರವಿಂದ್ ಹೇಳಿದರು.

Vijaya Karnataka 8 Sep 2018, 12:00 am
ಬಳ್ಳಾರಿ: ಪ್ರತಿಯೊಬ್ಬ ಕ್ರೀಡಾಪಟುವಿನ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಯಶಸ್ಸಿನಲ್ಲಿ ವೈದ್ಯರ ಪಾತ್ರ ಮುಖ್ಯವಾಗಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಶ್ರೀನಾಥ್ ಅರವಿಂದ್ ಹೇಳಿದರು.
Vijaya Karnataka Web BLR-7BLYPH17


ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ವತಿಯಿಂದ ನಗರದ ವಿಮ್ಸ್ ಕ್ರೀಡಾಂಗಣದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಏರ್ಪಡಿಸಿರುವ ‘ವೈದ್ಯಕೀಯ ಅಂತರ್ ಕಾಲೇಜುಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ- ಉತ್ಕರ್ಷ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘‘ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆಯ್ಕೆಯಾಗುವ ಸಂದರ್ಭದಲ್ಲಿ ಗಾಯಾಳು ಆಗಿದ್ದೆ. ಆಗ ವೈದ್ಯರು ಚಿಕಿತ್ಸೆಯೊಂದಿಗೆ ನನ್ನಲ್ಲಿ ಆತ್ಮವಿಶ್ವಾಸ ತುಂಬಿದ್ದರು. ಇದರಿಂದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಯಿತು’’ ಎಂದು ವೈದ್ಯರ ಸೇವೆ ಸ್ಮರಿಸಿದರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ, ಹುಬ್ಬಳ್ಳಿ, ಮೈಸೂರು, ಬೆಳಗಾವಿ ಸೇರಿ ರಾಜ್ಯದ 15 ವೈದ್ಯಕೀಯ ಕಾಲೇಜುಗಳ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ವಾಲಿಬಾಲ್, ಥ್ರೋಬಾಲ್, ಕಬಡ್ಡಿ, ಖೋಖೋ ಸೇರಿ ಇತರ ಕ್ರೀಡೆಗಳು ನಡೆಯಲಿವೆ.

ಉದ್ಘಾಟನಾ ಸಮಾರಂಭದಲ್ಲಿ ವಿಮ್ಸ್ ನಿರ್ದೇಶಕ ಡಾ.ಕೃಷ್ಣಸ್ವಾಮಿ, ವೈದ್ಯರಾದ ಡಾ.ಅರುಣ್, ಡಾ.ಶೇಖರಪ್ಪ, ಡಾ.ಶ್ರೀನಿವಾಸ, ಡಾ.ಬಿ.ಕೆ.ಶ್ರೀಕಾಂತ್, ಡಾ.ಎಸ್.ಕೆ.ಅರುಣ್, ಡಾ.ಸುರೇಶ್, ಡಾ.ಇಂದುಮತಿ, ದೈಹಿಕ ಶಿಕ್ಷಣ ಶಿಕ್ಷಕ ಅನಿಲ್ ಸೇರಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ