ಆ್ಯಪ್ನಗರ

B Sriramulu: ಯಾರೋ ಸವಾಲು ಹಾಕ್ತಾರೆ ಅಂತಾ ಸಿದ್ದರಾಮಯ್ಯ ವಿರುದ್ಧ ನಿಲ್ಲಲ್ಲ: ಶ್ರೀರಾಮುಲು

ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಸಿದ್ದರಾಮಯ್ಯ ವಿರುದ್ಧ ಬಿ ಶ್ರೀರಾಮುಲು ಚುನಾವಣೆಗೆ ಸ್ಪರ್ಧಿಸ್ತಾರೆ ಎಂಬ ಸುದ್ದಿ ರಾಜ್ಯ ರಾಜಕೀಯದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಶ್ರೀರಾಮುಲು, ಯಾರೋ ಸವಾಲು ಹಾಕ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಚುನಾವಣೆ ನಿಲ್ಲಲ್ಲ. ಪಕ್ಷ ಎಲ್ಲಿ‌ ಟಿಕೆಟ್ ಕೊಡುತ್ತೋ‌ ಅಲ್ಲಿ ಚುನಾವಣೆಗೆ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದಾರೆ.

Edited byಅವಿನಾಶ ವಗರನಾಳ | Vijaya Karnataka Web 1 Dec 2022, 4:06 pm

ಹೈಲೈಟ್ಸ್‌:


  • ಸಿದ್ದರಾಮಯ್ಯ ವಿರುದ್ಧ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಶ್ರೀರಾಮುಲು ಮಾತು
  • ಯಾರೋ ಸವಾಲು ಹಾಕ್ತಾರೆ ಅಂತಾ ಸಿದ್ದರಾಮಯ್ಯ ವಿರುದ್ಧ ನಿಲ್ಲಲ್ಲ ಎಂದ ರಾಮುಲು
  • ಪಕ್ಷ ಎಲ್ಲಿ ಟಿಕೆಟ್‌ ನೀಡುತ್ತೋ ಅಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದ ಸಚಿವ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Sriramulu
ಬಳ್ಳಾರಿ: ಯಾರೋ ಸವಾಲು ಹಾಕ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಚುನಾವಣೆ ನಿಲ್ಲಲ್ಲ. ಪಕ್ಷ ಎಲ್ಲಿ‌ ಟಿಕೆಟ್ ಕೊಡುತ್ತೋ‌ ಅಲ್ಲಿ ಚುನಾವಣೆಗೆ ಸ್ಪರ್ಧಿಸುವೆ ಎಂದು ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ. ಈ ಮೂಲಕ ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದಂತೆ ಈ ಸಲ ಸಿದ್ದರಾಮಯ್ಯ ವಿರುದ್ಧ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಬಿಜೆಪಿಯ ಎಸ್‌ಟಿ‌ ಸಮಾವೇಶದ ಯಶಸ್ವಿಯಾದ ಹಿನ್ನೆಲೆ ಪಕ್ಷದ ಪ್ರಬಂಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್‌ಟಿ ಸಮಾವೇಶದಲ್ಲಿ ಸಮಾಜದ ಒಗ್ಗಟಿನ ಪ್ರದರ್ಶನ ಮಾಡಿದ್ದೇವೆ. ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರದು ಸ್ವಾರ್ಥದ ಪಾದಯಾತ್ರೆ. ಆದರೆ, ಬಿಜೆಪಿ ಸಮಾಜದ ಹಿತಕ್ಕೆ ಸಮಾವೇಶ ಮಾಡಿದೆ ಎಂದು ಹೇಳಿದರು.

ಪುಂಗಿ ಮತ್ತು‌ ಡೊಂಗಿ ರಾಜಕಾರಣವನ್ನು ಕಾಂಗ್ರೆಸ್‌ ಮಾಡುತ್ತಿದೆ. ಎಸ್‌ಟಿ, ಎಸ್‌ಸಿ ಮೀಸಲಾತಿ ಪ್ರಮಾಣವನ್ನು ಕಾಂಗ್ರೆಸ್ ಏಕೆ ಹೆಚ್ಚಿಸಲಿಲ್ಲ. ಮೀಸಲಾತಿಯನ್ನು ಬಿಜೆಪಿ ಮಾತ್ರ ಹೆಚ್ಚಿಸಿದೆ. ನಾನು ಸಾಮಾನ್ಯ ವ್ಯಕ್ತಿ, ನಿಮ್ಮಿಂದಲೇ ನಾನು, ನನಗೆ ಸ್ಥಾನಮಾನ ಏನು ಇಲ್ಲ. ಪ್ರಬಂಧಕರು, ಪಕ್ಷದ ಕಾರ್ಯಕರ್ತರು, ಮುಖಂಡರೇ ಸಮಾವೇಶದ ಯಶಸ್ವಿಗೆ ಕಾರಣ ಎಂದರು.

ಗುಜರಾತಿನಲ್ಲಿ ಗುರುವಾರ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್‌ಗೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಮೂರು ರಾಜ್ಯದಲ್ಲಿ ಅಧಿಕಾರದಲ್ಲಿದ್ದು ಅಲ್ಲಿಯೂ ನೆಲಕಚ್ಚಲಿದೆ. ಎಸ್‌ಸಿ ಮತ್ತು‌ ಎಸ್‌ಟಿ ಸಮಾಜದವರು ಬಿಜೆಪಿ ಪರವಾಗಿ ನಿಲ್ಲುತ್ತಾರೆ ಎಂದು ಹೇಳಿದರು.

Sriramulu - ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಜೋಡೆತ್ತುಗಳಲ್ಲ, ಚಿರತೆಗಳು:ಶ್ರೀರಾಮುಲು ವ್ಯಂಗ್ಯ
ರೌಡಿಶೀಟರ್‌ ಅನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ, ಈ ಬಗ್ಗೆ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್‌ ಸ್ವಷ್ಟವಾಗಿ‌ ಹೇಳಿದ್ದಾರೆ. ಕಾಂಗ್ರೆಸ್‌ನವರು ಸುಮ್ಮನೆ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರ ಹಿನ್ನಲೆ ನೋಡಿದರೆ ಗುಂಡಾಗಳು ಇರುವುದು ತಿಳಿಯುತ್ತದೆ ಎಂದರು.

DK Shivakumar- ಶ್ರೀರಾಮುಲು ಮೊದಲು ಬಳ್ಳಾರಿ ಇಂಟರ್ನಲ್ ಸರಿಮಾಡಿಕೊಳ್ಳಲಿ: ಡಿ.ಕೆ.ಶಿವಕುಮಾರ್ ಟಾಂಗ್
ಸಿದ್ದರಾಮಯ್ಯ ಅವರು 2010ರಲ್ಲಿ ಕೈಗೊಂಡ ಬಳ್ಳಾರಿ ಪಾದಯಾತ್ರೆ ಸ್ವಾರ್ಥದ ಪಾದಯಾತ್ರೆ. ಅದಾದ ಬಳಿಕ 2013ರಲ್ಲಿ ಕಾಂಗ್ರೆಸ್‌ ಗೆದ್ದರು. 2013ರಿಂದ ಐದು ವರ್ಷದಲ್ಲಿ ನಮ್ಮ ಭಾಗಕ್ಕೆ ಏನು ಮಾಡಲಿಲ್ಲ ಎಂದು ಕಿಡಿಕಾರಿದ ಅವರು, ಯಾರೋ ಸವಾಲು ಹಾಕ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಚುನಾವಣೆ ನಿಲ್ಲಲ್ಲ. ಪಕ್ಷ ಎಲ್ಲಿ‌ ಟಿಕೆಟ್ ಕೊಡುತ್ತೋ‌ ಅಲ್ಲಿ ಚುನಾವಣೆಗೆ ಸ್ಪರ್ಧಿಸುವೆ ಎಂದು ಹೇಳಿದರು.

Amaregowda Bayyapura- ಸಿದ್ದರಾಮಯ್ಯ ಕುಷ್ಟಗಿಯಿಂದ ಸ್ಪರ್ಧಿಸಲು ಬಯಸಿದಲ್ಲಿ ಕ್ಷೇತ್ರ ಬಿಟ್ಟುಕೊಡುವೆ: ಶಾಸಕ ಅಮರೇಗೌಡ ಬಯ್ಯಪುರ
ಬಾದಾಮಿಯಲ್ಲಿ ಸಿದ್ದರಾಮಯ್ಯ VS ಶ್ರೀರಾಮುಲು ಫೈಟ್‌!
2018ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಇತ್ತ ಬಿಜೆಪಿಯಿಂದ ಶ್ರೀರಾಮುಲು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು ಕೂಡ, ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತು ಬಾದಾಮಿಯಲ್ಲಿ ಗೆದ್ದಿದ್ದರು. ಬಾದಾಮಿಯಲ್ಲಿ ಕೊನೆ ಕ್ಷಣದಲ್ಲಿ ಕಣಕ್ಕಿಳಿದಿದ್ದ ಶ್ರೀರಾಮುಲು ಸಿದ್ದರಾಮಯ್ಯ ಅವರಿಗೆ ಭಾರೀ ಫೈಟ್‌ ಕೊಟ್ಟು ಕೇವಲ 2,500 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಈ ಸಲವೂ ಅದೇ ರೀತಿ ಸ್ಪರ್ಧಾ ಕಣ ರೆಡಿಯಾಗುತ್ತೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು!
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ