ಆ್ಯಪ್ನಗರ

ಅಖಂಡ ಬಳ್ಳಾರಿ ಜಿಲ್ಲೆಗೆ ವಿರೋಧ: ಪ್ರತ್ಯೇಕ ಜಿಲ್ಲೆ ರಚನೆ ಪರ ಎಂಎಲ್‌ಸಿ ಕೊಂಡಯ್ಯ ಬ್ಯಾಟಿಂಗ್

ಅಖಂಡ ಬಳ್ಳಾರಿ ಹಾಗೂ ನೂತನ ಜಿಲ್ಲೆ ರಚನೆ ವಿರೋಧಿಸಿ ಇಂದು (ಮಂಗಳವಾರ) ಬಳ್ಳಾರಿ ಬಂದ್‌ಗೆ ಕರೆ ನೀಡಲಾಗಿದೆ.

Vijaya Karnataka Web 1 Oct 2019, 10:59 am
ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಗೆ ಆಗ್ರಹಿಸಿ ಬಳ್ಳಾರಿ ಬಂದ್‌ಗೆ ಕರೆ ನೀಡಿರುವ ಕನ್ನಡ ಪರ ಹಾಗೂ ರೈತ ಸಂಘಟನೆಗಳ ನಡೆಗೆ ವಿಧಾನ ಪರಿಷತ್ ಸದಸ್ಯ ಕೆ ಸಿ ಕೊಂಡಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
Vijaya Karnataka Web K C KONDAYYA


ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನನ್ನ ಸಹ ಮತವಿದೆ. ಕೆಲವರು ಪ್ರತ್ಯೇಕ ಜಿಲ್ಲೆ ರಚನೆಗೆ ವಿರೋಧ ವ್ಯಕ್ತಪಡಿಸಿದ್ದು, ಅದು ಅವರವರ ವೈಯಕ್ತಿಕ ಅಭಿಪ್ರಾಯವಾಗಿದೆ. ಬಹಿರಂಗವಾಗಿಯೇ ಅಭಿಪ್ರಾಯ ವ್ಯಕ್ತಪಡಿಸುವುದಲ್ಲ. ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದರು.

ವಿಜಯನಗರ' ಜಿಲ್ಲೆ ವಿರೋಧಿಸಿ ಬಳ್ಳಾರಿ ಬಂದ್: ಕೆ ಸಿ ಕೊಂಡಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ

ವಿಜಯನಗರ ಜಿಲ್ಲೆ ರಚನೆ ಕುರಿತು ಚರ್ಚಿಸುವ ಸಲುವಾಗಿ ನಾಳೆ (ಬುಧವಾರ) ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಜನ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಎಂದು ಹೇಳಿದರು.

ಬಳ್ಳಾರಿ ರಿಪಬ್ಲಿಕ್‌ ಇಬ್ಭಾಗಕ್ಕೆ ಗಣಿಧಣಿಗಳ ತೀವ್ರ ವಿರೋಧ

ವಿಜಯನಗರ ಪ್ರತ್ಯೇಕ ಜಿಲ್ಲೆಯಾದರೆ ಒಳ್ಳೆಯದು. ಕೆಲವರು ಪ್ರತ್ಯೇಕ ಜಿಲ್ಲೆ ವಿರೋಧಿಸುತ್ತಿರುವುದು ಅವರವರ ವೈಯಕ್ತಿಕ ಅಭಿಪ್ರಾಯ. ಎರಡು ಜಿಲ್ಲೆ ಪ್ರತ್ಯೇಕವಾದರೆ ಹೆಚ್ಚಿನ ಅಭಿವೃದ್ಧಿಯಾಗುತ್ತದೆ ಎಂದು ಪರೋಕ್ಷವಾಗಿ ಶಾಸಕ ಕರುಣಾಕರ ರೆಡ್ಡಿ ಅವರಿಗೆ ಟಾಂಗ್ ನೀಡಿದರು. ಹರಪ್ಪನಹಳ್ಳಿ ಜಿಲ್ಲೆಯಾಗಲು ಅಲ್ಲಿ ಅಗತ್ಯ ಸೌಕರ್ಯಗಳಿಲ್ಲ ಎಂದರು.

ವಿಜಯನಗರ ಜಿಲ್ಲೆ ವಿರೋಧಿಸಿ ಬಳ್ಳಾರಿ ಬಂದ್

ಅಖಂಡ ಬಳ್ಳಾರಿ ಹಾಗೂ ನೂತನ ಜಿಲ್ಲೆ ರಚನೆ ವಿರೋಧಿಸಿ ಇಂದು (ಮಂಗಳವಾರ) ಬಳ್ಳಾರಿ ಬಂದ್‌ಗೆ ಕರೆ ನೀಡಲಾಗಿದ್ದು, ನಗರದ ರಾಯಲ್ ಸರ್ಕಲ್ ವೃತ್ತದಲ್ಲಿ ವಿವಿಧ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ಆರಂಭಿಸಿದ್ದಾರೆ.

ರಾಯಲ್ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಿರುವ ವಿವಿಧ ಸಂಘಟನೆಯ ಪದಾಧಿಕಾರಿಗಳು, ಅನರ್ಹ ಶಾಸಕ ಆನಂದ್ ಸಿಂಗ್, ಎಂಎಲ್‌ಸಿಗಳಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಸೇರಿದಂತೆ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ