ಆ್ಯಪ್ನಗರ

ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ 497 ಮಂದಿಗೆ ಕೊರೊನಾ ದೃಢ: 21 ಸಾವಿರ ಗಡಿ ತಲುಪಿದ ಸೋಂಕಿತರ ಸಂಖ್ಯೆ!

ಬಳ್ಳಾರಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ 479 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20,998ಕ್ಕೆ ಏರಿಕೆಯಾಗಿದೆ.

Vijaya Karnataka Web 30 Aug 2020, 5:25 pm
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರ 497 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
Vijaya Karnataka Web ಕೊರೊನಾ ವೈರಸ್
ಸಾಂದರ್ಭಿಕ ಚಿತ್ರ


ಆಸ್ಪತ್ರೆಯಿಂದ 274 ಮಂದಿ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಮೂರು ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20,998ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 255ಕ್ಕೆ ಏರಿಕೆಯಾಗಿದೆ. ಒಟ್ಟು 4,941ಸಕ್ರೀಯ ಪ್ರಕರಣಗಳಿದ್ದು, ಇದುವರೆಗೆ 15,802 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇಂದು ಬಳ್ಳಾರಿ 176, ಸಂಡೂರು 29, ಸಿರುಗುಪ್ಪ 39, ಕೂಡ್ಲಿಗಿ 39, ಹೂವಿನ ಹಡಗಲಿ 58, ಹೊಸಪೇಟೆ 69, ಹಗರಿಬೊಮ್ಮನ ಹಳ್ಳಿ 50, ಹರಪನಹಳ್ಳಿ 36, ಅಂತರ್ ಜಿಲ್ಲೆಯ ಒಂದು ಪ್ರಕರಣಗಳು ಪತ್ತೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ