ಆ್ಯಪ್ನಗರ

ಕುಡಿತಿನಿ ಕೆರೆಗೆ ಸಂಸದ ವಿ.ಎಸ್‌.ಉಗ್ರಪ್ಪ ಭೇಟಿ

ಶುದ್ಧ ಕುಡಿವ ನೀರನ್ನು ಕುಡಿತಿನಿ ಪಟ್ಟಣದ ಜನರಿಗೆ ಒದಗಿಸಲಾಗುತ್ತದೆ.ಕೆರೆಯಲ್ಲಿ ನೀರು ಸಂಗ್ರಹ, ಭದ್ರತೆ ಹಾಗೂ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ನಿಯಮ ಪಾಲನೆ ಮಾಡದ ಕಾರ್ಖಾನೆ ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಂಸದ ವಿ.ಎಸ್‌.ಉಗ್ರಪ್ಪ ಹೇಳಿದರು.

Vijaya Karnataka 14 Dec 2022, 2:50 pm
ಬಳ್ಳಾರಿ : ಶುದ್ಧ ಕುಡಿವ ನೀರನ್ನು ಕುಡಿತಿನಿ ಪಟ್ಟಣದ ಜನರಿಗೆ ಒದಗಿಸಲಾಗುತ್ತದೆ.ಕೆರೆಯಲ್ಲಿ ನೀರು ಸಂಗ್ರಹ, ಭದ್ರತೆ ಹಾಗೂ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ನಿಯಮ ಪಾಲನೆ ಮಾಡದ ಕಾರ್ಖಾನೆ ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಂಸದ ವಿ.ಎಸ್‌.ಉಗ್ರಪ್ಪ ಹೇಳಿದರು.
Vijaya Karnataka Web vs ugrappa


ತಾಲೂಕಿನ ಕುಡಿತಿನ ಪಟ್ಟಣಕ್ಕೆ ಕುಡಿವ ನೀರು ಪೂರೈಸುವ ಕೆರೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದು, ಇದೇ ಕೆರೆ ನೀರನ್ನು ಸೇವಿಸುತ್ತಿದ್ದಾರೆ. ಹಾಗಾಗಿ ಕೆರೆಯನ್ನು ಉತ್ತಮ ಸ್ಥಿತಿಯಲ್ಲಿಟ್ಟಕೊಳ್ಳಬೇಕಿದೆ. ಅಲ್ಲದೇ ನೀರನ್ನು ಶುದ್ಧೀಕರಿಸಿ ಜನರಿಗೆ ಪೂರೈಸುವ ಕಾರ್ಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಪಟ್ಟಣದ ಸುತ್ತಲಿನ ಕೈಗಾರಿಕೆಗಳಿಂದ ಬರುವ ಧೂಳು, ಹೊಗೆ, ಕಪ್ಪು ಬಣ್ಣದಿಂದ ಕೆರೆ ಪ್ರದೇಶ ಆವೃತ್ತವಾಗಿರುವುದು ಕಂಡುಬಂದಿದೆ. ಕೆರೆಯ ಸುತ್ತಮುತ್ತಲಿನ ಖಾಲಿ ಜಾಗದಲ್ಲಿ ಜಾಲಿ ಗಿಡಗಳು ಬೆಳೆದಿದ್ದು, ಅವುಗಳನ್ನು ತೆರವುಗೊಳಿಸಿ ಗಿಡ ಮರಗಳನ್ನು ಬೆಳಸಬೇಕು. ದಿನದ 24*7 ಇಬ್ಬರು ಕಾವಲುಗಾರರನ್ನು ನೇಮಕ ಮಾಡಬೇಕು. ಕೆರೆಯ ಸುತ್ತಮುತ್ತ ಇರುವ ಕಾರ್ಖಾನೆಗಳಿಗೆ ನೋಟಿಸ್‌ ಜಾರಿ ಮಾಡಿ ಯಾವುದೇ ಕಾರಣಕ್ಕೂ ಮಲಿನವಾಗದಂತೆ ಹಾಗೂ ಕೆರೆಗೆ ಧೂಳು ಶೇಖರಣೆಯಾಗದಂತೆ ನೋಡಿಕೊಳ್ಳುಬೇಕು ಎಂದು ಸೂಚಿಸಲಾಗುತ್ತದೆ. ಒಂದು ವೇಳೆ ಅದೇ ರೀತಿ ಮುಂದುವರಿಸಿದರೆ ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.

ಜನರ ಆರೋಗ್ಯದ ಹಿತದೃಷ್ಟಿಯಿಂದ ವೈಜ್ಞಾನಿಕ ರೀತಿಯಲ್ಲಿ ನೀರನ್ನು ಶುದ್ಧಿಕರಿಸಿ ಜನರಿಗೆ ಪೂರೈಸುವ ಕಾರ್ಯ ಇನ್ನು 10 ದಿನಗಳೊಳಗೆ ನಡೆಯಬೇಕು, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಮೇಶ್‌ ಕೋನರೆಡ್ಡಿ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ