ಆ್ಯಪ್ನಗರ

'ಕನ್ನಡ ವಿಶ್ವವಿದ್ಯಾಲಯ ಉಳಿಸಿ' ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ ಕರವೇ

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸರಕಾರ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು ಶುಕ್ರವಾರ (ಡಿ.18) ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. #ಕನ್ನಡವಿವಿಉಳಿಸಿ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುವಂತೆ ಮನವಿ ಮಾಡಿದೆ.

Vijaya Karnataka Web 17 Dec 2020, 11:24 pm
ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸರಕಾರ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು ಶುಕ್ರವಾರ (ಡಿ.18) ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ. ಕನ್ನಡ ವಿವಿಯನ್ನು ಉಳಿಸುವ ಸಲುವಾಗಿ ಪ್ರತಿಯೊಬ್ಬರೂ #ಕನ್ನಡವಿವಿಉಳಿಸಿ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುವಂತೆ ಮನವಿ ಮಾಡಿದೆ.
Vijaya Karnataka Web save kannada university


ರಾಜ್ಯ ಸರಕಾರವು 'ಹಂಪಿ ಕನ್ನಡ ವಿಶ್ವವಿದ್ಯಾಲ'ಯಕ್ಕೆ ಅಗತ್ಯ ಅನುದಾನ ಒದಗಿಸದೆ ನಿಧಾನವಾಗಿ ವಿಷವುಣಿಸಿ ಕೊಲ್ಲುತ್ತಿದೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ಹಾಗಾಗಿಯೇ ಈ ಟ್ವಿಟರ್ ಆಂದೋಲನವನ್ನು ಹಮ್ಮಿಕೊಂಡಿದ್ದೇವೆ' ಎಂದು ಕರವೇ ಸಂಘಟನೆಯ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.


ಕನ್ನಡ ವಿಶ್ವವಿದ್ಯಾಲಯ ಕನ್ನಡಿಗರ ಶಕ್ತಿಕೇಂದ್ರ

ಕನ್ನಡದ ಬುಡಕಟ್ಟು, ಪರಂಪರೆ, ಇತಿಹಾಸ, ಸಾಹಿತ್ಯ ಮತ್ತು ಸಂಸ್ಕೃತಿಯನ್ನ ಉಳಿಸಲು ಮಹತ್ವದ ಪಾತ್ರವಹಿಸುತ್ತಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸರಕಾರ ವರ್ಷದಿಂದ ವರ್ಷಕ್ಕೆ ಅನುದಾನ ಕಡಿತಗೊಳಿಸುತ್ತಲೇ ಬಂದಿದೆ. ಅದರಲ್ಲೂ ಕಳೆದ ಎರಡು ವರ್ಷಗಳಿಂದ ವಿಶ್ವವಿದ್ಯಾಲಯ ಅಭಿವೃದ್ಧಿ ಅನುದಾನದಲ್ಲೂ ಭಾರೀ ಕಡಿತ ಮಾಡಿದೆ. ಕೋವಿಡ್‌ ಲಾಕ್‌ಡೌನ್‌, ಪ್ರವಾಹದ ಕಾರಣ ನೀಡಿ ವಿವಿ ಅನುದಾನಕ್ಕೆ ಸರಕಾರ ಕತ್ತರಿ ಹಾಕಿದೆ. ಈ ವರ್ಷ ಅತಿ ಕನಿಷ್ಠ ಅನುದಾನ ನೀಡಿ ವಿಶ್ವವಿದ್ಯಾಲಯವನ್ನು ಅಳಿವಿನ ಅಂಚಿಗೆ ತರಲಾಗಿದೆ. ಇದು ಕನ್ನಡ-ಕನ್ನಡಿಗರ ಪಾಲಿಗೆ ದುರಂತವೇ ಸರಿ, ಹಿಗಾಗಿ ಎಲ್ಲ ಕರುನಾಡ ಸಹೋದರರು ಒಗ್ಗಟ್ಟಾಗಿ ನಿಂತು ಸರ್ಕಾರದ ಈ ನಿಲುವನ್ನ ಪ್ರತಿಭಟಿಸುವಂತೆ ಕೋರಲಾಗಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಹ್ಯಾಷಟ್ಯಾಗ್‌ : #ಕನ್ನಡವಿವಿಉಳಿಸಿ
ಸಮಯ: ಡಿ.18 ಶುಕ್ರವಾರ ಸಂಜೆ 5 ಗಂಟೆ
ಯಾರನ್ನೆಲ್ಲ ಟ್ಯಾಗ್ ಮಾಡಬಹುದು: ಆಡಳಿತ ಸರಕಾರ, ವಿರೋಧ ಪಕ್ಷದ ನಾಯಕರು, ರಾಜಕೀಯ ವ್ಯಕ್ತಿಗಳು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ