ಆ್ಯಪ್ನಗರ

ನಕಲಿ ಪ್ರಮಾಣ ಪತ್ರ ವಿತರಣೆ ಖಂಡಿಸಿ ಪ್ರತಿಭಟನೆ

ಸವರ್ಣೀಯ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ಎಸ್ಟಿ ಮೀಸಲು ಪ್ರಮಾಣ ಪತ್ರ ನೀಡಲಾಗಿದ್ದು, ಇದಕ್ಕೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

Vijaya Karnataka 15 Aug 2018, 5:00 am
ಬಳ್ಳಾರಿ : ಸವರ್ಣೀಯ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ಎಸ್ಟಿ ಮೀಸಲು ಪ್ರಮಾಣ ಪತ್ರ ನೀಡಲಾಗಿದ್ದು, ಇದಕ್ಕೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
Vijaya Karnataka Web BLR-14BLY07


ಕುರುಗೋಡು ತಾಲೂಕಿನ ಎಮ್ಮಿಗನೂರಿನ ದೊಡ್ಡಯ ತಂದೆ ಬಸ್ಸಯ್ಯ ಎನ್ನುವವರು ಸವರ್ಣೀಯ ಜಾತಿಗೆ ಸೇರಿದ್ದು, ಇವರಿಗೆ ಎಸ್ಟಿ ಮೀಸಲು ಪ್ರಮಾಣ ಪತ್ರ ನೀಡಲಾಗಿದೆ. ಕುರುಗೋಡು ತಹಸೀಲ್ದಾರ್‌ ಎಂ.ಬಸವರಾಜ ನಕಲಿ ಜಾತಿ ಪ್ರಮಾಣ ಪತ್ರ ವಿತರಿಸಿದ್ದಾರೆ. ಪರಿಶಿಷ್ಟ ಪಂಗಡದಲ್ಲಿ ಸದ್ಯ ಸುಮಾರು 51 ಸುಮುದಾಯಗಳಿದ್ದು, ಅದರಲ್ಲಿ ವಾಲ್ಮೀಕಿ ಜನಾಂಗ ಹೆಚ್ಚಿನ ಪ್ರಮಾಣದಲ್ಲಿದೆ. ಶೇ.7.5ರಷ್ಟು ಮೀಸಲಾತಿಯನ್ನು ರಾಜ್ಯ ಸರಕಾರ ಘೋಷಿಸಿದೆ ಆದರೆ ಇದನ್ನೇ ಜಾರಿ ಮಾಡಲು ಸರಕಾರ ಮೀನಮೇಷ ಮಾಡುತ್ತಿದೆ. ಇದರಿಂದಾಗಿ ವಾಲ್ಮೀಕಿ ಸಮುದಾಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಅತ್ಯಂತ ಹಿಂದುಳಿಯುತ್ತಿದೆ. ಇಂತಹ ಸನ್ನಿವೇಶದ ನಡುವೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರವನ್ನು ಸವರ್ಣೀಯ ಸಮುದಾಯದವರಿಗೆ ನೀಡಿ ಅನ್ಯಾಯ ಮಾಡಲಾಗುತ್ತಿದೆ. ಕೂಡಲೇ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಪಡಿಸಬೇಕು. ತಹಸೀಲ್ದಾರ್‌ ಬಸವರಾಜ ಅವರನ್ನು ಸೇವೆಯಿಂದ ತಕ್ಷಣ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ಮುಖಂಡರಾದ ಬಿ.ರುದ್ರಪ್ಪ, ಎನ್‌.ಸತ್ಯನಾರಾಯಣ, ವಿಜಯಕುಮಾರ ಸಂಗನಕಲ್ಲು, ಬಿ.ಶಿವಲಿಂಗ ನಾಯಕ, ವಿ.ಕೆ.ಬಸ್ಸಪ್ಪ ಸೇರಿದಂತೆ ನಾನಾ ಸಂಘಟನೆಗಳ ಮುಖಂಡರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ