ಆ್ಯಪ್ನಗರ

ನಿವೇಶನ ಮಂಜೂರಾತಿಗೆ ಆಗ್ರಹಿಸಿ ಪ್ರತಿಭಟನೆ

ಮನೆ ಅಥವಾ ನಿವೇಶನ ಮಂಜೂರಾತಿ ಮಾಡುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Vijaya Karnataka 13 Feb 2018, 5:00 am

ಬಳ್ಳಾರಿ: ಮನೆ ಅಥವಾ ನಿವೇಶನ ಮಂಜೂರಾತಿ ಮಾಡುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ರಾಜ್ಯ ಸಮಿತಿ ಸಂಚಾಲಕಿ ಬಿ.ಮಾಳಮ್ಮ ನೇತೃತ್ವದಲ್ಲಿ ನೂರಾರು ಪರಿಶಿಷ್ಟ ಪಂಗಡ ಸಮುದಾಯದವರು ಸಮಾವೇಶಗೊಂಡು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ, ಕಚೇರಿಯ ಸಿಬ್ಬಂದಿಗೆ ಮನವಿಪತ್ರ ಸಲ್ಲಿಸಿದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿವೇಶನ, ಮನೆಗಾಗಿ ಸಲ್ಲಿಸಿರುವ ಅರ್ಜಿಯನ್ನು ವಿಲೇವಾರಿ ಮಾಡಬೇಕು. ಭೂರಹಿರ ಕುಟುಂಬಸ್ಥರಿಗೆ ತಲಾ ಐದು ಎಕರೆ ಭೂಮಿ ಮಂಜೂರು ಮಾಡಬೇಕು. ಪರಿಶಿಷ್ಟರ ಮೀಸಲಾತಿಯನ್ನು ಶೇ.3 ರಿಂದ 7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕಾಗಿ ಆಯಾ ಜಿಲ್ಲೆಗೊಂದು ನ್ಯಾಯಾಲಯ ಸ್ಥಾಪಿಸಬೇಕು. ದಲಿತರ ಅಭಿವೃದ್ಧಿಗೆ ಶೇ.30ರಷ್ಟು ಅನುದಾನ ಮೀಸಲಿರಿಸಬೇಕು. ಮಾಜಿ ದೇವದಾಸಿಯರಿಗೆ 5,000 ರೂ.ಮಾಸಿಕ ವೇತನ ನೀಡಬೇಕು. ಖಾಸಗಿ ವಲಯದಲ್ಲೂ ಮೀಸಲಾತಿ ಸೌಲಭ್ಯ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಮಿತಿ ಪದಾಧಿಕಾರಿಗಳಾದ ಮರಡಿ ಜಂಬಯ್ಯನಾಯಕ, ಯು.ಬಸವರಾಜ, ಎಸ್‌.ಸತ್ಯಮೂರ್ತಿ, ಬಿ.ರಮೇಶಕುಮಾರ ಸೇರಿದಂತೆ ನೂರಾರು ಪರಿಶಿಷ್ಟ ಪಂಗಡ ಸಮುದಾಯದ ಮಹಿಳೆಯರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ