ಆ್ಯಪ್ನಗರ

‘ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಿ’

ಪಿಯು ಉಪನ್ಯಾಸಕರು ಮೌಲ್ಯ ಮಾಪನ ಬಹಿಷ್ಕರಿಸಲು ರಾಜ್ಯ ಸರಕಾರವೇ ನೇರ ಹೊಣೆಯಾಗಿದೆ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಡಾ.ಪ್ರಮೋದ್ ಹಾಗೂ ಜಿಲ್ಲಾಧ್ಯಕ್ಷ ಗೋವಿಂದ್ ದೂರಿದ್ದಾರೆ.

ವಿಕ ಸುದ್ದಿಲೋಕ 12 Apr 2016, 6:40 am
ಬಳ್ಳಾರಿ; ಪಿಯು ಉಪನ್ಯಾಸಕರು ಮೌಲ್ಯ ಮಾಪನ ಬಹಿಷ್ಕರಿಸಲು ರಾಜ್ಯ ಸರಕಾರವೇ ನೇರ ಹೊಣೆಯಾಗಿದೆ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಡಾ.ಪ್ರಮೋದ್ ಹಾಗೂ ಜಿಲ್ಲಾಧ್ಯಕ್ಷ ಗೋವಿಂದ್ ದೂರಿದ್ದಾರೆ.
Vijaya Karnataka Web response to the problem of lecturer
‘ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಿ’


ಈ ಬಗ್ಗೆ ಸೋಮವಾರ ಜಂಟಿ ಹೇಳಿಕೆ ನೀಡಿ, ಪಿಯು ಉಪನ್ಯಾಸಕರು ಕಳೆದ ಹಲವು ವರ್ಷಗಳಿಂದ ನಾನಾ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ, ಹೋರಾಟಗಳನ್ನು ನಡೆಸುತ್ತಿದ್ದರೂ ಈವರೆಗೂ ಯಾವುದೇ ಸರಕಾರಗಳು ಸೂಕ್ತ ಕ್ರಮ ಕೈಗೊಳ್ಳದೇ ಕಡೆಗಣಿಸಿವೆ. ಹೀಗಾಗಿ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ. ರಾಜ್ಯ ಸರಕಾರ ಉಪನ್ಯಾಸಕರ ಸಮಸ್ಯೆಗಳನ್ನು ಈಡೇರಿಸುವ ಬದಲು ಹಠಮಾರಿ ಧೋರಣೆ ಪ್ರದರ್ಶಿಸುತ್ತಿದೆ. ಈ ಕೂಡಲೇ ರಾಜ್ಯ ಸರಕಾರ ಉಪನ್ಯಾಸಕರ ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ