ಆ್ಯಪ್ನಗರ

ಸಿದ್ದರಾಮಯ್ಯ ಲಾಟರಿ ಸಿಎಂ

ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ತಕ್ಕ ಪಾಠ ಕಲಿಸಬೇಕು ಎಂದು ಪ್ರತಿಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಹೇಳಿದರು.

Vijaya Karnataka 7 May 2018, 5:00 am
ಸಿರುಗುಪ್ಪ : ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ತಕ್ಕ ಪಾಠ ಕಲಿಸಬೇಕು ಎಂದು ಪ್ರತಿಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಹೇಳಿದರು.
Vijaya Karnataka Web BLR-BLY6SGP3


ತಾಲೂಕಿನ ರಾರಾವಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಎಸ್‌.ಸೋಮಲಿಂಗಪ್ಪ ಅವರ ಪರ ಮತಯಾಚನೆ ನಡೆಸಿ ಭಾನುವಾರ ಮಾತನಾಡಿದರು.

ಕುಡಿವ ನೀರು, ರಸ್ತೆ, ಶಿಕ್ಷಣ, ಚರಂಡಿ,ಅಂಗನವಾಡಿ ಕೇಂದ್ರ ಸೇರಿದಂತೆ ನಾನಾ ಮೂಲ ಸೌಲಭ್ಯ ಕಲ್ಪಿಸಲು ರಾಜ್ಯ ಸರಕಾರ ವಿಫಲವಾಗಿದ್ದು, ಈ ಚುನಾವಣೆಯಲ್ಲಿ ರಾಜ್ಯದ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ದೇಶದ 21 ರಾಜ್ಯದಲ್ಲಿ ಬೇಡವಾಗಿರುವ ಕಾಂಗ್ರೆಸ್‌ ನಮಗೂ ಬೇಡ ಎಂದು ಪ್ರತಿಯೊಬ್ಬ ಮತದಾರರು ನಿರ್ಧರಿಸಿದ್ದಾರೆ.

ಬೆಂಗಳೂರಿನಿಂದ ಬಂದು ಚುನಾವಣೆಗೆ ನಿಂತಿರುವ ಕಾಂಗ್ರೆಸ್‌ ಅಭ್ಯರ್ಥಿ ಮುರಳಿ ಕೃಷ್ಣರನ್ನು ಕ್ಷೇತ್ರದ ಜನತೆ ಬೇಗನೆ ಯಲಹಂಕಕ್ಕೆ ವಾಪಸ್‌ ಕಳುಹಿಸುವುದು ಖಚಿತ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಣದಿಂದ ಮತ ಪಡೆದು ಅಧಿಕಾರಕ್ಕೆ ಬರಬಹುದು ಎನ್ನುವ ಭ್ರಮೆಯಲ್ಲಿರುವ ಕಾಂಗ್ರೆಸ್‌ಗೆ ಜನತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಮನವಿ ಮಾಡಿದರು.

-----

ಬಿಜೆಪಿಯಲ್ಲಿನ ಭಿನ್ನಮತ ಹಾಗೂ ಕೆಜೆಪಿ ಹಾಗೂ ಬಿಎಸ್‌ಆರ್‌ ಪಕ್ಷ ಗಳಾಗಿ ವಿಭಜನೆಗೊಂಡ ಹಿನ್ನೆಲೆಯಲ್ಲಿ ಲಾಟರಿ ಹೊಡೆದಂತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

-ಕೆ.ಎಸ್‌.ಈಶ್ವರಪ್ಪ , ಪ್ರತಿಪಕ್ಷದ ನಾಯಕ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ