ಆ್ಯಪ್ನಗರ

ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ದೇಶದ್ರೋಹ ಪ್ರಕರಣದಡಿ ಕ್ರಮ ಕೈಗೊಳ್ಳಿ; ಎಬಿವಿಪಿ

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿನಿಮಾ ನಟನಟಿಯರನ್ನು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಇದೀಗ ಡ್ರಗ್ಸ್ ದಂಧೆಯಲ್ಲಿ ತೊಡಗಿಸಿಕೊಂಡವರನ್ನು ದೇಶದ್ರೋಹಿ ಪ್ರಕರಣದಡಿ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ಸಂಘಟನೆ ಆಗ್ರಹಿಸಿದೆ.

Vijaya Karnataka Web 4 Sep 2020, 2:53 pm
ಬಳ್ಳಾರಿ: ಡ್ರಗ್ಸ್‌ ದಂಧೆಯಲ್ಲಿ ತೊಡಗಿಸಿಕೊಂಡವರನ್ನು ದೇಶದ್ರೋಹಿ ಪ್ರಕರಣದಡಿ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ಜಿಲ್ಲಾಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
Vijaya Karnataka Web abvp
Representative image


ಸ್ಯಾಂಡಲ್‌ವುಡ್‌ನೊಂದಿಗೆ ನಂಟಿರುವ ಬೃಹತ್‌ ಡ್ರಗ್ಸ್‌ ಜಾಲವನ್ನು ಅಧಿಕಾರಿಗಳು ಭೇದಿಸಿರುವ ಬಗ್ಗೆ ಮತ್ತು ಡ್ರಗ್ಸ್‌ ಜಾಲದ ಹಿಂದೆ ಸಮಾಜದಲ್ಲಿಇರುವಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಚಟುವಟಿಕೆಗಳಿಗೆ ಅಂಟಿಕೊಂಡಿರುವುದು ಬೇಸರದ ಸಂಗತಿ. ರಾಜ್ಯದ ಹಲವು ಶಾಲಾ, ಕಾಲೇಜುಗಳಲ್ಲಿ ಡ್ರಗ್ಸ್‌ ಜಾಲ ವ್ಯವಸ್ಥಿತವಾಗಿ ಕೋಡ್‌ ವರ್ಡ್‌ಗಳ ಮೂಲಕ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಂಕಟ, ಸಮಸ್ಯೆ ಹೆಚ್ಚಿಸಿದ ನಿರ್ಲಕ್ಷ್ಯ: ಸಕಾಲ ಚಿಕಿತ್ಸೆಯತ್ತ ಸರಕಾರದ ಲಕ್ಷ್ಯ

ಇನ್ನು ಡ್ರಗ್‌ ಅಡಿಕ್ಟ್ ಆಗುವುದು ಒಂದು ರೀತಿಯ ಫ್ಯಾಶನ್‌ ಆಗಿ ಮಾರ್ಪಡುತ್ತಿರುವ ಅಂಶ ಬಯಲಾಗುತ್ತಿದೆ. ಈ ನಿಟ್ಟಿನಲ್ಲಿ ಪೋಷಕರು ಎಚ್ಚರ ವಹಿಸಬೇಕಿದೆ. ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೊಲೀಸ್‌ ಇಲಾಖೆ ಮತ್ತಷ್ಟು ಚುರುಕುಗೊಳಿಸಬೇಕು. ಯಾವುದೇ ಒತ್ತಡಕ್ಕೆ ಗೃಹ ಇಲಾಖೆ ಮಣಿಯದೇ ಪೊಲೀಸ್‌ ಇಲಾಖೆಗೆ ಸಂಪೂರ್ಣ ಸ್ವತಂತ್ರ ನೀಡಬೇಕೆಂದು ಎಬಿವಿಪಿ ಸಂಘಟನೆಯ ಮುಖಂಡರು ಆಗ್ರಹಿಸಿದರು.

ಸ್ಥಳೀಯ ಸಂಸ್ಥೆಗೆ ಅನಾಸ್ಥೆ: 2 ವರ್ಷಗಳಿಂದ ಮೀಸಲಾತಿ ನಿಗದಿಯಾಗದೇ ನಡೆಯದ ಅಧ್ಯಕ್ಷ,

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿನಿಮಾ ನಟನಟಿಯರನ್ನು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ