ಆ್ಯಪ್ನಗರ

‘ಅಪೌಷ್ಟಿಕತೆ ಹೋಗಲಾಡಿಸಲು ಸಾರ್ವಜನಿಕರ ಸಹಕಾರ ಅಗತ್ಯ’

ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದ ಮೂಲಕ ಅಪೌಷ್ಟಿಕತೆ ವಿರುದ್ಧ ಹೋರಾಡಲು ವ್ಯಾಪಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಸಹಕರಿಸಬೇಕು ಜತೆಗೆ ಇದರ ಉಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಎಸ್‌.ಬಿ.ಹಂದ್ರಾಳ್‌ ಹೇಳಿದರು.

Vijaya Karnataka 9 Sep 2018, 5:00 am
ಬಳ್ಳಾರಿ : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದ ಮೂಲಕ ಅಪೌಷ್ಟಿಕತೆ ವಿರುದ್ಧ ಹೋರಾಡಲು ವ್ಯಾಪಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಸಹಕರಿಸಬೇಕು ಜತೆಗೆ ಇದರ ಉಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಎಸ್‌.ಬಿ.ಹಂದ್ರಾಳ್‌ ಹೇಳಿದರು.
Vijaya Karnataka Web BLR-8BLYPH12


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಳ್ಳಾರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಮತ್ತು ಮಹಿಳಾ ಮತ್ತು ಮಕ್ಕಳ ಇಲಾಖೆ ಜಂಟಿಯಾಗಿ ತಾಲೂಕಿನ ಕುಡಿತಿನಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿ, ಸೆಪ್ಟೆಂಬರ್‌ನಲ್ಲಿ ಪೌಷ್ಟಿಕ ಆಹಾರ ಮಾಸಾಚಾರಣೆ ನಿಮಿತ್ತ ಪ್ರತಿವಾರ ನಾನಾ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕನಿಷ್ಠ 2 ವರ್ಷಗಳವರೆಗೆ ಎದೆ ಹಾಲು ನೀಡುವುದರಿಂದ ಮಗು ಸಶಕ್ತವಾಗಿ ಮತ್ತು ಆರೋಗ್ಯವಾಗಿ ಬೆಳೆಯಲು ಸಹಾಯಕವಾಗುತ್ತದೆ. ಆರು ತಿಂಗಳಿನಿಂದ ಪೂರಕ ಆಹಾರ ಪಡೆಯುವ ಮಗು ಉತ್ತಮ ಬೆಳವಣಿಗೆ ಹೊಂದುತ್ತದೆ. ಮನೆಯಲ್ಲಿಯೇ ತಯಾರಿಸಿದ ಮಂದವಾದ ಮೃದು ಸಾಂಧ್ರತೆಯಿರುವ ಚಮಚೆಯಲ್ಲಿ ಸುಲಭವಾಗಿ ನಿಲ್ಲುವ ಆಹಾರ ಸುಲಭವಾಗಿ ಜೀರ್ಣಗೊಂಡು ಮಗುವಿನ ಹೊಟ್ಟೆ ತುಂಬಿಸುತ್ತದೆ ಎಂದರು.

ದ್ವಿದಳ ಧಾನ್ಯ-ಬಟಾಣಿ ಬೀನ್ಸ್‌, ಅವರೆ ಮತ್ತು ಬೇಳೆ ಕಾಳುಗಳು ಪೌಷ್ಟಿಕಾಂಶದ ಉತ್ತಮ ಮೂಲಗಳು. ವಿಟಮಿನ್‌ ಸಿ ಹೆಚ್ಚಿರುವ ಆಹಾರಗಳು ಕಬ್ಬಿಣಾಂಶದ ಹೀರುವಿಕೆಗೆ ಸಹಕಾರಿ, ದಟ್ಟ ಹಸಿರೆಲೆಗಳು ಮತ್ತು ಕಿತ್ತಳೆ ಬಣ್ಣದ ಹಣ್ಣುಗಳು ಮತ್ತು ತರಕಾರಿಗಳು ವಿಟಮಿನ್‌ ಎ ನಿಂದ ಸಂಪದ್ಭರಿತವಾಗಿದೆ. ಬೆಳೆಯುವ ಮಗುವಿಗೆ ಮೇಲಿಂದ ಮೇಲೆ ಅಲ್ಪ ಆಹಾರದ ಅವಶ್ಯಕತೆ ಇರುತ್ತದೆ. ನಾನಾ ರೀತಿಯ ಆಹಾರ ನೀಡಬೇಕು, ಬೆಳೆಯುವ ಮಗುವಿಗೆ ಆಹಾರ ಪ್ರಮಾಣದಲ್ಲಿ ಏರಿಕೆ ಅಗತ್ಯವಿದೆ. ಬೆಳೆಯುತ್ತಿರುವ ಮಗುವಿಗೆ ತಾನೇ ತಿನ್ನಲು ಕಲಿಸಿ ಪ್ರೋತ್ಸಾಹಿಸಿರಿ ಎಂದು ಸಲಹೆ ನೀಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ. ಅಬ್ದುಲ್ಲಾ ಅಧ್ಯಕ್ಷ ತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷ ಣಾಧಿಕಾರಿ ಈಶ್ವರ ದಾಸಪ್ಪನವರ್‌ ಮಾತನಾಡಿದರು. ವೈದ್ಯಾಧಿಕಾರಿಗಳಾದ ಡಾ.ರವಿಚಂದ್ರ, ಡಾ.ಸುರೇಶ, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಲಾವತಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗೋವಿಂದ ಪೂಜಾರಿ, ಐಸಿಡಿಎಸ್‌ ಮೇಲ್ವಿಚಾರಕಿ ಸುಶೀಲಮ್ಮ, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ