ಆ್ಯಪ್ನಗರ

ಬುಧವಾರ ಸಂಜೆಯೊಳಗೆ ಸಂಚಾರಿ ನಿಯಮ ಉಲ್ಲಂಘನೆ ದಂಡ ಕಡಿಮೆ ಮಾಡಲು ಸೂಚನೆ: ಲಕ್ಷ್ಮಣ ಸವದಿ

ಸಾರಿಗೆ ಸಂಚಾರ ನಿಯಮ ಉಲ್ಲಂಘನೆ ದಂಡ ಪ್ರಮಾಣವನ್ನು ಕೆಲವು ರಾಜ್ಯಗಳಲ್ಲಿ ಕಡಿಮೆ ಮಾಡಲಾಗಿದೆ. ಈಗ ಕರ್ನಾಟಕದಲ್ಲಿಯೂ ಅದೇ ರೀತಿ ಕಡಿತಗೊಳಿಸುವ ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇದೆ.

Vijaya Karnataka Web 17 Sep 2019, 9:45 pm
ಬಳ್ಳಾರಿ: ಕಳೆದ ಕೆಲವು ದಿನಗಳಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದ ವಾಹನ ಸವಾರರು ಈಗ ತುಸು ನಿರಾಳರಾಗಬಹುದು. ಏಕೆಂದರೆ ಬುಧವಾರದಿಂದ ಕರ್ನಾಟಕದಲ್ಲಿಯೂ ದಂಡ ಪ್ರಮಾಣ ಕಡಿಮೆಯಾಗಲಿದೆ.
Vijaya Karnataka Web ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ


ಈ ಕುರಿತು ಖುದ್ದು ಸಾರಿಗೆ ಇಲಾಖೆ ಉಸ್ತುವಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂಕೋರ್ಟ್‌ನ ಆದೇಶದಂತೆ ಕೇಂದ್ರ ಸರಕಾರ ಜಾರಿಗೆ ತಂದ ಹೊಸ ಮೋಟಾರು ಕಾಯ್ದೆ ಪ್ರಕಾರ ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸುತ್ತಿದ್ದ ಹೆಚ್ಚುವರಿ ದಂಡವನ್ನು ಕಡಿಮೆ ಮಾಡುವ ನಿರ್ಧಾರವನ್ನು ನಾಳೆ ಸಂಜೆಯೊಳಗೆ ಪ್ರಕಟಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಲಕ್ಷ್ಮಣ ಸವದಿ ಮಾತನಾಡಿದರು.

ದಂಡ ಕಡಿಮೆ ಮಾಡುವ ಕುರಿತು ಈಗಾಗಲೇ ಚರ್ಚೆಯಾಗಿದೆ. ನಾಳೆ ಸಂಜೆ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದರು.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವನಾಗಿರುವುದು, ತಮಗೆ ಸಂತಸ ತಂದಿದೆ. ಈ ಭಾಗವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸಲಾಗುವುದು, ಸಚಿವ ಶ್ರೀರಾಮುಲು ಜತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಲಕ್ಷ್ಮಣ ಸವದಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ