ಆ್ಯಪ್ನಗರ

ಮತದಾನದ ಜಾಗೃತಿಗೆ ಪ್ರತಿಜ್ಞೆ

ಜಿಲ್ಲಾಡಳಿತ, ಜಿಲ್ಲಾ ಮತದಾರರಿಗೆ ವ್ಯವಸ್ಥಿತ ಶಿಕ್ಷ ಣ ಹಾಗೂ ಸಹಭಾಗಿತ್ವ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಕಡ್ಡಾಯ ಮತದಾನದ ಜಾಗೃತಿ ಕಾರ್ಯಕ್ರಮ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ನಡೆಸಿ, ಪ್ರತಿಜ್ಞೆ ವಿಧಿ ಬೋಧಿಸಲಾಯಿತು.

Vijaya Karnataka Web 12 Apr 2018, 5:00 am
ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಮತದಾರರಿಗೆ ವ್ಯವಸ್ಥಿತ ಶಿಕ್ಷ ಣ ಹಾಗೂ ಸಹಭಾಗಿತ್ವ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಕಡ್ಡಾಯ ಮತದಾನದ ಜಾಗೃತಿ ಕಾರ್ಯಕ್ರಮ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ನಡೆಸಿ, ಪ್ರತಿಜ್ಞೆ ವಿಧಿ ಬೋಧಿಸಲಾಯಿತು.
Vijaya Karnataka Web BLR-11BLYPH11


ಡಿಎಚ್‌ಒ ರಮೇಶ್‌ಬಾಬು ಮಾತನಾಡಿ, ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, 18 ವರ್ಷ ತುಂಬಿದ ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಆರೋಗ್ಯ ಕೇಂದ್ರಗಳಿಗೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳಿಗೆ ತಪ್ಪದೇ ಮತಚಲಾಯಿಸುವಂತೆ ಮನವಿ ಮಾಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಕ್ಷ ಯರೋಗ ನಿಯಂತ್ರಣ ಅಧಿಕಾರಿ ಡಾ.ಎಚ್‌. ನಿಜಾಮುದ್ದೀನ್‌, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್‌. ವಿಜಯಲಕ್ಷ್ಮಿ, ಜಿಲ್ಲಾ ಸರ್ವೆಲೆನ್ಸ್‌ ಅಧಿಕಾರಿ ಡಾ.ಆರ್‌. ಅನಿಲ್‌ ಕುಮಾರ್‌, ಕೊಪ್ಪಳ ಜಿಲ್ಲೆಯ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಂಬಯ್ಯ, ಡಾ.ಲಕ್ಷ್ಮಿಕಾಂತ್‌, ಜಿಲ್ಲಾ ಆರೋಗ್ಯ ಶಿಕ್ಷ ಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಜಿಲ್ಲೆಯ ತಾಲೂಕು ಆರೋಗ್ಯ ಅಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಮತದಾನ ಜಾಗೃತಿ ಜಾಥಾ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸರ್ವರೂ ಮತ ಚಲಾಯಿಸುವಂತೆ ಮಾಡಲು ನಗರದ ನಾನಾ ಸರಕಾರಿ ಪ್ರಾಥಮಿಕ ಶಾಲೆಗಳ ವತಿಯಿಂದ ಮತದಾನ ಜಾಗೃತಿ ಜಾಥಾ ಸೋಮವಾರ ನಡೆಯಿತು.

ಜಾಗೃತಿ ಜಾಥಾ ನಗರದ ಕೊಳಗಲ್ಲು ರಸ್ತೆಯಲ್ಲಿರುವ ಇಂದಿರಾನಗರ ಶಾಲೆ, ಪಶ್ಚಿಮ ವಲಯದ ಹಾವಂಬಾವಿ ಶಾಲೆ ಮತ್ತು ಭತ್ರಿಯ ಸರಕಾರಿ ಪ್ರಾಥಮಿಕ ಶಾಲೆಗಳೊಂದಿಗೆ ಸಿಆರ್‌ಪಿ ವತಿಯಿಂದ ಕಡ್ಡಾಯ ಮತದಾನ ಜಾಗೃತಿ ಮೂಡಿಸಲಾಯಿತು.

ಮನೆ ಮನೆಗೆ ತೆರಳಿ ಮತದಾನದ ಹಕ್ಕು ಮತ್ತು ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಯೊಬ್ಬರೂ ಮತದಾನ ಮಾಡುವಂತೆ ತಿಳಿಸಲಾಯಿತು.

ಶಾಲಾ ಮಕ್ಕಳು ಮತ್ತು ಶಾಲಾ ಸಿಬ್ಬಂದಿಯೊಂದಿಗೆ ಬ್ಯಾನರ್‌ ಹಿಡಿದು, ಭಿತ್ತಿಪತ್ರಗಳನ್ನು ಹಂಚುತ್ತಾ ಮತದಾನ ಜಾಗೃತಿ ಘೋಷಣೆಗಳನ್ನು ಕೂಗುತ್ತ ಸರ್ವರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಕೈಜೋಡಿಸಿ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷ ಣಾಧಿಕಾರಿ ಖೈರುನ್ನೀಸಾ ಬೇಗಂ, ಸಿಆರ್‌ಪಿ ತಿಮ್ಮಯ್ಯ, ಶಾಲಾ ಮುಖ್ಯ ಶಿಕ್ಷ ಕರು ಮತ್ತು ಸಿಬ್ಬಂದಿ, ಶಾಲಾ ಮಕ್ಕಳೊಂದಿಗೆ ಪೋಷಕರು ಜಾಥಾದಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ