ಆ್ಯಪ್ನಗರ

ಬೆಂಗಳೂರು: 1.70 ಲಕ್ಷ ದಾಟಿದ ಗುಣಮುಖರ ಸಂಖ್ಯೆ

ಕೊರೊನಾ ಸೋಂಕಿನ ಆರ್ಭಟದ ನಡುವೆಯೂ ಚೇತರಿಸಿಕೊಂಡು ಮನೆಗೆ ಮರಳುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗುತ್ತಿದೆ. ಗುಣಮುಖರ ಸಂಖ್ಯೆಯು 1.70 ಲಕ್ಷ ದಾಟಿದ್ದು, ಶನಿವಾರವೂ 2494 ಮಂದಿ ಆಸ್ಪತ್ರೆಗಳು ಮತ್ತು ಕೋವಿಡ್‌ ಆರೈಕೆ ಕೇಂದ್ರಗಳಿಂದ ಬಿಡುಗಡೆಗೊಂಡಿದ್ದಾರೆ.

Vijaya Karnataka Web 26 Sep 2020, 11:20 pm
ಬೆಂಗಳೂರು: ನಗರದಲ್ಲಿ ಕೊರೊನಾ ವೈರಾಣು ಸೋಂಕಿನ ಅಟ್ಟಹಾಸ ಮುಂದುವರಿದಿದ್ದು, ಶನಿವಾರವೂ 4083 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಕೋವಿಡ್‌ ಪೀಡಿತರಲ್ಲಿ 27 ಮಂದಿ ಬಲಿಯಾಗಿದ್ದಾರೆ.
Vijaya Karnataka Web ಕೊರೊನಾ
ಕೊರೊನಾ

ಕೊರೊನಾ ಸೋಂಕಿನ ಆರ್ಭಟದ ನಡುವೆಯೂ ಚೇತರಿಸಿಕೊಂಡು ಮನೆಗೆ ಮರಳುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗುತ್ತಿದೆ. ಗುಣಮುಖರ ಸಂಖ್ಯೆಯು 1.70 ಲಕ್ಷ ದಾಟಿದ್ದು, ಶನಿವಾರವೂ 2494 ಮಂದಿ ಆಸ್ಪತ್ರೆಗಳು ಮತ್ತು ಕೋವಿಡ್‌ ಆರೈಕೆ ಕೇಂದ್ರಗಳಿಂದ ಬಿಡುಗಡೆಗೊಂಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆವ್ಯಾಪ್ತಿಯಲ್ಲಿ ಶರವೇಗದಲ್ಲಿ ಹರಡುತ್ತಿರುವ ಕೋವಿಡ್‌ ಸೋಂಕು ಇಲ್ಲಿಯವರೆಗೆ 2,16,630 ಮಂದಿಯಲ್ಲಿ ಕಾಣಿಸಿಕೊಂಡಿದೆ. ಈ ಪೈಕಿ 1,70,430 ಮಂದಿ ಚೇತರಿಸಿಕೊಂಡಿದ್ದಾರೆ. ಉಳಿದ 43,378 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‌ ಸೋಂಕಿನಿಂದ ನರಳುತ್ತಿದ್ದ 2821 ಮಂದಿ ಸಾವಿಗೀಡಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ