ಆ್ಯಪ್ನಗರ

ಬೆಂಗಳೂರಲ್ಲಿ ಇಳಿಕೆಯ ಹಾದಿಯತ್ತ ಸೋಂಕು: 1874 ಹೊಸ ಪ್ರಕರಣ ಪತ್ತೆ

ನಗರದಲ್ಲಿ ಕೋವಿಡ್‌ ಮಹಾಮಾರಿಯ ಆರ್ಭಟಕ್ಕೆ ಕಡಿವಾಣ ಬಿದ್ದಿದ್ದು, ಮಂಗಳವಾರ ಕೇವಲ 1874 ಸೋಂಕಿತ ಪ್ರಕರಣಗಳಷ್ಟೇ ವರದಿಯಾಗಿವೆ. ಸೋಂಕಿಗೆ 24 ಮಂದಿ ಬಲಿಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 46,628ಕ್ಕೆ ಇಳಿಕೆಯಾಗಿದೆ.

Vijaya Karnataka Web 27 Oct 2020, 11:01 pm
ಬೆಂಗಳೂರು: ನಗರದಲ್ಲಿ ಕೋವಿಡ್‌ ಮಹಾಮಾರಿಯ ಆರ್ಭಟಕ್ಕೆ ಕಡಿವಾಣ ಬಿದ್ದಿದ್ದು, ಮಂಗಳವಾರ ಕೇವಲ 1874 ಸೋಂಕಿತ ಪ್ರಕರಣಗಳಷ್ಟೇ ವರದಿಯಾಗಿವೆ. ಸೋಂಕಿಗೆ 24 ಮಂದಿ ಬಲಿಯಾಗಿದ್ದಾರೆ.
Vijaya Karnataka Web covid-19
Representative image


ಬೆಂಗಳೂರು ನಗರ ಜಿಲ್ಲೆಯಲ್ಲಿ ಈವರೆಗೆ 3,29,250 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದ್ದು, ಈ ಪೈಕಿ 2,78,843 ಮಂದಿ ಚೇತರಿಸಿಕೊಂಡಿದ್ದಾರೆ. ಮಂಗಳವಾರ ಒಂದೇ ದಿನ 4446 ಮಂದಿ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 46,628ಕ್ಕೆ ಇಳಿಕೆಯಾಗಿದೆ.

ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದವರಲ್ಲಿ 3778 ಮಂದಿ ಸಾವಿಗೀಡಾಗಿದ್ದಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 429 ರೋಗಿಗಳ ಸ್ಥಿತಿ ಗಂಭೀರವಾಗಿ ತೀವ್ರ ನಿಗಾ ಘಟಕಗಳಲ್ಲಿ ದಾಖಲಿಸಲಾಗಿದೆ.

ಬೆಂಗಳೂರಲ್ಲಿ ಏಕಾಂಗಿಯಾಗಿ ಪ್ರಯಾಣಿಸಲೂ ಮಾಸ್ಕ್‌ ಕಡ್ಡಾಯ: ಬಿಬಿಎಂಪಿ ಸ್ಪಷ್ಟನೆ

ದಿನದ ಅಂಕಿ ಅಂಶ
* ಒಟ್ಟು ಸೋಂಕಿತರು 3,29,250
* ಗುಣಮುಖ 2,78,843
* ಸಕ್ರಿಯ 46,628
* ಮೃತಪಟ್ಟವರು 3778

ಐಟಿ ಕಂಪನಿಗಳಲ್ಲಿ ಇಂಟರ್ನ್‌ಗಳಿಗೆ ಆಕರ್ಷಕ ವೇತನ: ಆರಂಭದಲ್ಲೇ 50 ಸಾವಿರ ಸಂಬಳ

ರಾಜ್ಯದಲ್ಲಿ ಮಂಗಳವಾರ ಒಂದೇ ದಿನ ರಾಜ್ಯದಲ್ಲಿ 3691ಹೊಸ ಪ್ರಕರಣಗಳು ದೃಢಪಟ್ಟಿವೆ. ಇದೇ ಸಂದರ್ಭದಲ್ಲಿ 7740 ಮಂದಿ ಸೋಂಕಿತರು ಸಂಪೂರ್ಣ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 71330ಕ್ಕೆ ಇಳಿಕೆಯಾಗಿದೆ. ಇದುವರೆಗೆ 7,27,298 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 8,09,638ಕ್ಕೆ ಏರಿಕೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ