ಆ್ಯಪ್ನಗರ

ಯುವತಿಯರ ಅಕ್ರಮ ಬಂಧನ : ಉಡುಪಿ ಮೂಲದ ವ್ಯಕ್ತಿಯ ಬಂಧನ

ಲೇಡೀಸ್‌ ಬಾರ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಅವರನ್ನು ಅಕ್ರಮ ಬಂಧನದಲ್ಲಿಟ್ಟುಕೊಂಡು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ ಆರೋಪದ ಮೇಲೆ ಉಡುಪಿ ಮೂಲದ ಪ್ರವೀಣ್‌ ಶೆಟ್ಟಿ ಎಂಬಾತನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 28 ಯುವತಿಯರನ್ನು ರಕ್ಷಿಸಿದ್ದಾರೆ.

Vijaya Karnataka 15 Nov 2018, 5:00 am
ಬೆಂಗಳೂರು : ಲೇಡೀಸ್‌ ಬಾರ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಅವರನ್ನು ಅಕ್ರಮ ಬಂಧನದಲ್ಲಿಟ್ಟುಕೊಂಡು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ ಆರೋಪದ ಮೇಲೆ ಉಡುಪಿ ಮೂಲದ ಪ್ರವೀಣ್‌ ಶೆಟ್ಟಿ ಎಂಬಾತನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 28 ಯುವತಿಯರನ್ನು ರಕ್ಷಿಸಿದ್ದಾರೆ.
Vijaya Karnataka Web 28 girls rescued
ಯುವತಿಯರ ಅಕ್ರಮ ಬಂಧನ : ಉಡುಪಿ ಮೂಲದ ವ್ಯಕ್ತಿಯ ಬಂಧನ


ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆರ್‌.ಆರ್‌.ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ಹೊರ ರಾಜ್ಯದಿಂದ ಯುವತಿಯರನ್ನು ಕರೆಸಿಕೊಂಡು ಅಕ್ರಮ ಬಂಧನದಲ್ಲಿ ಇರಿಸಲಾಗಿದೆ ಎನ್ನುವ ಸುಳಿವು ಸಿಸಿಬಿ ಅಧಿಕಾರಿಗಳಿಗೆ ಸಿಕ್ಕಿತ್ತು. ಈ ಸುಳಿವಿನ ಬೆನ್ನತ್ತಿದ ತಂಡ ಮನೆಯ ಮೇಲೆ ದಾಳಿ ನಡೆಸಿದಾಗ 28 ಮಂದಿ ಯುವತಿಯರು ಅಕ್ರಮ ಬಂಧನದಲ್ಲಿದ್ದರು. ಇವರನ್ನು ವಿಚಾರಣೆಗೆ ಒಳಪಡಿಸಿದಾಗ ಉಡುಪಿ ಮೂಲದ ಪ್ರವೀಣ್‌ ಶೆಟ್ಟಿ ಎಂಬಾತ ತಮ್ಮನ್ನು ಕರೆತಂದು ಬಂಧನದಲ್ಲಿ ಇಟ್ಟಿರುವುದಾಗಿ ತಿಳಿಸಿದರು ಎಂದು ಪೊಲೀಸರು ಮಾಹಿತಿ ನೀಡಿದರು.

ಈ ಮಾಹಿತಿ ಆಧರಿಸಿ ಪ್ರವೀಣ್‌ ಶೆಟ್ಟಿಯನ್ನು ಬಂಧಿಸಿರುವ ಪೊಲೀಸರು ದಿಲ್ಲಿ, ಪಂಜಾಬ್‌ನ ಮೂವರು, ಮುಂಬಯಿ-ರಾಜಸ್ಥಾನದ ತಲಾ ನಾಲ್ವರು ಹಾಗೂ ಉತ್ತರ ಪ್ರದೇಶದ 14 ಯುವತಿಯರನ್ನು ರಕ್ಷಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ