ಆ್ಯಪ್ನಗರ

ವಲಸೆ ಕಾರ್ಮಿಕರ ಮನೆಗಳಿಗೆ ಬೆಂಕಿ, ದುಷ್ಕರ್ಮಿಗಳ ಬಂಧನಕ್ಕೆ ಆಮ್‌ ಆದ್ಮಿ ಪಕ್ಷ ಒತ್ತಾಯ

ಬೆಂಗಳೂರಿನಲ್ಲಿ ವಾಸವಾಗಿದ್ದ ವಲಸೆ ಕಾರ್ಮಿಕರ ಜೋಪಡಿಗಳಿಗೆ ಅವರು ತಮ್ಮ ಊರುಗಳಿಗೆ ಹೋಗಿದ್ದ ಸಂದರ್ಭದಲ್ಲಿ ಬೆಂಕಿ ಹಚ್ಚಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಮ್‌ ಆದ್ಮಿ ಪಕ್ಷ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

Vijaya Karnataka Web 27 May 2020, 1:56 pm
ಬೆಂಗಳೂರು: ಬೆಂಗಳೂರಿನಲ್ಲಿ ವಲಸೆ ಕಾರ್ಮಿಕರ ಮನೆಗಳಿಗೆ ಬೆಂಕಿ ಹಚ್ಚಿ ನಾಶ ಮಾಡುತ್ತಿರುವ ದುಷ್ಕೃತ್ಯಗಳ ವಿರುದ್ಧ ಕಾನೂನ ಕ್ರಮವನ್ನು ಕೈಗೊಳ್ಳಬೇಕು ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ. ಲಾಕ್ ಡೌನ್ ಆರಂಭವಾದ ದಿನಗಳಿಂದ ಈ ರೀತಿಯ ಅಮಾನವೀಯ ಕೃತ್ಯಗಳು ನಡೆಯುತ್ತಿದ್ದು ಕಿಡಿಗೇಡಿಗಳನ್ನು ಬಂಧಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.
Vijaya Karnataka Web amm admi party


ಬೆಂಗಳೂರಿನ ಕಾಚರಕಹಳ್ಳಿ ಯಲ್ಲಿರುವ ವಲಸೆ ಕಾರ್ಮಿಕರ ಮನೆಗಳು ಹಾಗೂ ಜೋಪಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಅಲ್ಲಿ ಬದುಕುತ್ತಿದ್ದ ಉತ್ತರ ಕರ್ನಾಟಕ ಭಾಗದ ನೂರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹಿಂತಿರುಗಿದ್ದರು.

ಮೇ 31ರ ನಂತರ ಲಾಕ್ಡೌನ್ ನಿಯಮ ರೂಪಿಸುವ ನಿರ್ಧಾರ ಆಯಾ ರಾಜ್ಯಗಳಿಗೆ..!?

ಮತ್ತೆ ತಮ್ಮ ಮನೆಗಳಿಗೆ ಬಂದಾಗ ಅವರ ಮನೆಗಳು, ಜೋಪಡಿಗಳು ಸಂಪೂರ್ಣ ಕರಕಲಾಗಿದೆ. ಅವರು ಕೇವಲ ಮನೆಗಳನ್ನು ಮಾತ್ರ ಕಳೆದುಕೊಂಡಿಲ್ಲ, ಅವರ ಬಟ್ಟೆ ಬರೆ, ಮಕ್ಕಳ ಪುಸ್ತಕಗಳು ಮತ್ತು ಶಾಲಾ ದಾಖಲೆ, ಅಂಕ ಪ್ರಮಾಣ ಪತ್ರಗಳನ್ನೂ ಕಳೆದುಕೊಂಡಿದ್ದಾರೆ.

ಈ ಪೈಕಿ ಹತ್ತನೇ ತರಗತಿಯ ಪರೀಕ್ಷೆಗೆ ಸಿದ್ಧಗೊಳ್ಳುತ್ತಿದ್ದ ವಿದ್ಯಾರ್ಥಿಗಳು ಇದ್ದು ತಮ್ಮ ದಾಖಲೆ ಪತ್ರಗಳನ್ನು ಕಳೆದುಕೊಂಡು ಕಂಗೆಟ್ಟಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಆರೋಪಿಸಿದ್ದಾರೆ. ಬುಧವಾರ ಆಮ್ ಆದ್ಮಿ ಪಕ್ಷದ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದು ಮನೆಗಳು ಧ್ವಂಸಗೊಳಿಸಿರುವ ಕುರಿತಾಗಿ ಪರಿಶೀಲನೆ ನಡೆಸಿ ತಕ್ಷಣ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ