ಆ್ಯಪ್ನಗರ

‌ಗೃಹರಕ್ಷಕ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ, ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್‌ಐಆರ್

ಜ.20ರಂದು ಕೇಂದ್ರದ ಕೃಷಿ ಕಾಯಿದೆಗಳ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ಆಯೋಜಿತ್ತು. ಈ ವೇಳೆ ಶಾಸಕಿ ಸೌಮ್ಯಾರೆಡ್ಡಿ ಅವರನ್ನು ಪೊಲೀಸರು ಮತ್ತು ಕರ್ತವ್ಯದಲ್ಲಿದ್ದ ಗೃಹರಕ್ಷಕ ಸಿಬ್ಬಂದಿ ತಡೆದಿದ್ದರು. ​ಈ ವೇಳೆ ಕೋಪಗೊಂಡ ಸೌಮ್ಯಾರೆಡ್ಡಿ, ಗೃಹರಕ್ಷಕ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು.

Vijaya Karnataka 22 Jan 2021, 11:06 pm
ಬೆಂಗಳೂರು: ಕರ್ತವ್ಯನಿರತ ಗೃಹ ರಕ್ಷಕ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಧಿರೆಧಿಗೆ ಜಯನಗರ ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
Vijaya Karnataka Web sowmya Reddy


ಐಪಿಸಿ ಕಲಂ 323, ಉದ್ದೇಶಪೂರ್ವಕವಾಗಿ ಹಲ್ಲೆ, ಕಲಂ 353 ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಆರೋಪದ ಮೇರೆಗೆ ಶುಕ್ರವಾರ ಎಫ್‌ಐಆರ್‌ ದಾಖಲಾಗಿದೆ. ಹಲ್ಲೆಗೊಳಗಾಗಿದ್ದ ಗೃಹ ರಕ್ಷಕ ಸಿಬ್ಬಂದಿ ದೂರು ನೀಡಿದ್ದರು.

ಜ.20ರಂದು ಕೇಂದ್ರದ ಕೃಷಿ ಕಾಯಿದೆಗಳ ವಿರುದ್ಧ ಕಾಂಗ್ರೆಸ್‌ ಪಕ್ಷದಿಂದ ಬೃಹತ್‌ ಪ್ರತಿಭಟನೆ ಆಯೋಜಿಸಲಾಗಿತ್ತು. ಸ್ವಾತಂತ್ರ್ಯ ಉದ್ಯಾನದ ಬಳಿ ಸೇರಿದ್ದ ಕಾಂಗ್ರೆಸ್‌ ಮುಖಂಡರು ರಾಜಭವನ ಕಡೆ ತೆರಳಲು ಯೋಚಿಸಿದ್ದರು. ಈ ವೇಳೆ ಶಾಸಕಿ ಸೌಮ್ಯಾರೆಡ್ಡಿ ಅವರನ್ನು ಪೊಲೀಸರು ಮತ್ತು ಕರ್ತವ್ಯದಲ್ಲಿದ್ದ ಗೃಹರಕ್ಷಕ ಸಿಬ್ಬಂದಿ ತಡೆದಿದ್ದರು. ಈ ವೇಳೆ ಕೋಪಗೊಂಡ ಸೌಮ್ಯಾರೆಡ್ಡಿ, ಗೃಹರಕ್ಷಕ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು.

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪೊಲೀಸ್‌ ಪೇದೆಗೆ ಹಲ್ಲೆ: ಟ್ವಿಟ್ಟರ್‌ನಲ್ಲಿ ಸೌಮ್ಯ ರೆಡ್ಡಿ v/s ಶ್ರೀರಾಮುಲು ಜಟಾಪಟಿ
ಶಾಸಕಿ ವರ್ತನೆಗೆ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕ್ರಿಮಿನಲ್‌ ಕೇಸ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿತ್ತು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಸ್‌ ದಾಖಲಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಗೃಹರಕ್ಷಕ ಸಿಬ್ಬಂದಿ ನೀಡಿದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆ ನಡೆದ ದಿನವೇ ಸೌಮ್ಯಾರೆಡ್ಡಿ ಘಟನೆಯಿಂದ ನೋವಾಗಿದ್ದಾರೆ ಕ್ಷಮೆಯಾಚಿಸುವೆ ಎಂದು ಟ್ವೀಟ್‌ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ