ಆ್ಯಪ್ನಗರ

Voters List Scam: ಮತಪಟ್ಟಿ ಅಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅಮಾನತಿಗೆ ಕಾಂಗ್ರೆಸ್ ಆಗ್ರಹ

ರಾಜ್ಯ ಸರ್ಕಾರಕ್ಕೆ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಅಮಾನತು ಮಾಡಲು ಶಿಫಾರಸ್ಸು ಮಾಡಬೇಕು ಎಂದು, ಚುನಾವಣಾ ‌ಆಯೋಗಕ್ಕೆ ಪತ್ರ ಬರೆದು ರಮೇಶ್ ಬಾಬು ಆಗ್ರಹಿಸಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 24 Nov 2022, 4:51 pm

ಹೈಲೈಟ್ಸ್‌:

  • ಮತಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರ ಅಮಾನತಿಗೆ ಕಾಂಗ್ರೆಸ್ ಆಗ್ರಹ
  • ಚುನಾವಣಾ ಅಧಿಕಾರಿ ಅಕ್ರಮಗಳಲ್ಲಿ‌ ಶಾಮೀಲಾದರೆ ಅವರ ವಿರುದ್ಧ ಕ್ರಮಕ್ಕೆ ಅವಕಾಶ ಇದೆ. ಸೆಕ್ಷನ್ 32 ಆರ್ ಪಿ ಆಕ್ಟ್ 1950 ಅಡಿಯಲ್ಲಿ ಕ್ರಮಕ್ಕೆ ಅವಕಾಶ ಇದೆ.
  • ತುಷಾರ್ ಗಿರಿನಾಥ್ ಅವರನ್ನು ಚುನಾವಣಾ ಕಾರ್ಯ ನಿರ್ವಹಣೆ ಹುದ್ದೆಯಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Tushar Girinath BBMP Chief Commissioner
ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ನಡೆದ ಮತಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರ ಅಮಾನತಿಗೆ ಕಾಂಗ್ರೆಸ್ ಆಗ್ರಹಿಸಿದೆ. ಈ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರರಾದ ರಮೇಶ್ ಬಾಬು ಅವರು ಕೇಂದ್ರ ಚುನಾವಣಾ ‌ಆಯೋಗಕ್ಕೆ ಪತ್ರವನ್ನು ಬರೆದಿದ್ದಾರೆ.
ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯೂ ಆಗಿದ್ದಾರೆ. ಆದರೆ ತುಷಾರ್ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತಪಟ್ಟಿ ಪರಿಷ್ಕರಣೆಗೆ ಅವಕಾಶ ಕೊಟ್ಟಿದ್ದಾರೆ. ಚಿಲುಮೆ ಸಂಸ್ಥೆ ಮತದಾರರ ಪರಿಷ್ಕರಣೆಯ ಹೆಸರಿನಲ್ಲಿ ವೈಯಕ್ತಿಕ ಮಾಹಿತಿಯನ್ನು ಸಂಗ್ರಹ ಮಾಡಿದೆ. ಹಾಗೂ ಇದನ್ನು ದುರುಪಯೋಗಪಡಿಸಿಕೊಂಡಿದೆ.


ಚಿಲುಮೆ ಸಂಸ್ಥೆ ಕಿಂಗ್‌ಪಿನ್‌ ಕೆಂಪೇಗೌಡನ ಬಂಧನ

ಚುನಾವಣಾ ಅಧಿಕಾರಿ ಅಕ್ರಮಗಳಲ್ಲಿ‌ ಶಾಮೀಲಾದರೆ ಅವರ ವಿರುದ್ಧ ಕ್ರಮಕ್ಕೆ ಅವಕಾಶ ಇದೆ. ಸೆಕ್ಷನ್ 32 ಆರ್ ಪಿ ಆಕ್ಟ್ 1950 ಅಡಿಯಲ್ಲಿ ಕ್ರಮಕ್ಕೆ ಅವಕಾಶ ಇದೆ. ಈ ನಿಟ್ಟಿನಲ್ಲಿ ತುಷಾರ್ ಗಿರಿನಾಥ್ ಅವರನ್ನು ಚುನಾವಣಾ ಕಾರ್ಯ ನಿರ್ವಹಣೆ ಹುದ್ದೆಯಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರಕ್ಕೆ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಅಮಾನತು ಮಾಡಲು ಶಿಫಾರಸ್ಸು ಮಾಡಬೇಕು ಎಂದು ಪತ್ರ ಬರೆದು ರಮೇಶ್ ಬಾಬು ಆಗ್ರಹಿಸಿದ್ದಾರೆ.

Karnataka Assembly Election 2023: ಮತಪಟ್ಟಿ ಪರಿಷ್ಕರಣೆ ಅಕ್ರಮದಲ್ಲಿ ಬಿಜೆಪಿ ಪಾತ್ರ ಇಲ್ಲ: ಪಿ. ರಾಜೀವ್ ಸ್ಪಷ್ಟನೆ
ಏನಿದು ಚಿಲುಮೆ ಪ್ರಕರಣ?
ಮತದಾರರಿಗೆ ಜಾಗೃತಿ ಮೂಡಿಸುವ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಚಿಲುಮೆ ಸಂಸ್ಥೆ ಬಿಎಲ್‌ಓ ( ಬೂತ್‌ ಮಟ್ಟದ ಅಧಿಕಾರಿ) ಹೆಸರಿನಲ್ಲಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ಮತದಾರರ ಮನೆಗಳಿಗೆ ತೆರಳಿ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡಿದೆ ಹಾಗೂ ಈ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಇದೆ. ಬಿಎಲ್‌ಒ ಗುರುತಿನ ಚೀಟಿಯನ್ನು ಸರ್ಕಾರಿ ನೌಕರರು ಅಥವಾ ಅರೆ ಸರ್ಕಾರಿ ಸಿಬ್ಬಂದಿ ಅಲ್ಲದೆ ಬೇರೆಯವರು ಪಡೆದುಕೊಳ್ಳುವುದು ಅಪರಾಧವಾಗಿದೆ.

ಮತದಾರರ ಪರಿಷ್ಕರಣೆ ಅಕ್ರಮದಲ್ಲಿ ಚಿಲುಮೆ ಎಂಟರ್‌ ಪ್ರೈಸಸ್ ಪ್ರೈ.ಲಿ ಹಾಗೂ ಡಿಎಪಿ ಹೊಂಬಾಳೆ ಪ್ರೈ.ಲಿ ಎಂಬ ಸಂಸ್ಥೆಗಳೂ ಇದರಲ್ಲಿ ಭಾಗಿಯಾಗಿವೆ. ಈ ಸಂಸ್ಥೆ ಡಿಜಿಟಲ್‌ ಸಮೀಕ್ಷಾ ಎಂಬ ಆಪ್ ಮೂಲಕ ದತ್ತಾಂಶವನ್ನು ಸಂಗ್ರಹ ಮಾಡಿದೆ. ಬಿಎಲ್‌ಒ ಅಧಿಕಾರಿಗಳ ಹೆಸರಿನಲ್ಲಿ ಮತದಾರರ ಜಾತಿ, ಲಿಂಗ, ಆಧಾರ್ ಸಂಖ್ಯೆ, ಮೊಬೈಲ್ ನಂಬರ್‌ ಮತ್ತಿತರ ಮಾಹಿತಿಯನ್ನು ಸಂಗ್ರಹ ಮಾಡಿದೆ ಎಂಬ ಆರೋಪ ಇದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ