ಆ್ಯಪ್ನಗರ

ವೈಮಾನಿಕ ಪ್ರದರ್ಶನಕ್ಕೂ ಮುನ್ನವೇ ವೈಟ್‌ ಟ್ಯಾಪಿಂಗ್‌ ಕಾಮಗಾರಿ ಪೂರ್ಣಕ್ಕೆ ಬಿಬಿಎಂಪಿ ಆಡಳಿತಾಧಿಕಾರಿ ಸೂಚನೆ

ಥಣಿಸಂದ್ರ ಮುಖ್ಯರಸ್ತೆಯು ಬಾಗಲೂರು ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಅಲ್ಲದೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ರಸ್ತೆಯಾಗಿದೆ. ಈ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, ಒಂದು ಬದಿಯಲ್ಲಿಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ ವೈಟ್‌ಟಾಪಿಂಗ್‌ ಕಾಮಗಾರಿ ಶುರು ಮಾಡಲಾಗಿದೆ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತ ಹೇಳಿದರು.

Vijaya Karnataka Web 2 Dec 2020, 7:30 am
ಬೆಂಗಳೂರು: 'ಏರೋ ಇಂಡಿಯಾ-2021' ವೈಮಾನಿಕ ಪ್ರದರ್ಶನವು ಫೆಬ್ರವರಿ ಮೊದಲ ವಾರದಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಬಳಸಿಕೊಂಡು ಥಣಿಸಂದ್ರ ಮುಖ್ಯರಸ್ತೆಯಲ್ಲಿ ಕೈಗೊಂಡಿರುವ ವೈಟ್‌ಟಾಪಿಂಗ್‌ ಕಾಮಗಾರಿಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web BBMP Gaurav gupta


ಪಾಲಿಕೆ ವತಿಯಿಂದ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಕೈಗೊಂಡಿರುವ ವೈಟ್‌ಟಾಪಿಂಗ್‌ ಮತ್ತು ರಾಷ್ಟ್ರೋತ್ಥಾನ ಜಂಕ್ಷನ್‌ನಲ್ಲಿನ ಮೇಲ್ಸೇತುವೆ ಕಾಮಗಾರಿಯ ತಪಾಸಣೆ ನಡೆಸಿದ ಬಳಿಕ ಮಾತನಾಡಿದ ಅವರು, ಥಣಿಸಂದ್ರ ಮುಖ್ಯರಸ್ತೆಯು ಬಾಗಲೂರು ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಅಲ್ಲದೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ರಸ್ತೆಯಾಗಿದೆ. ಈ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, ಒಂದು ಬದಿಯಲ್ಲಿಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ ವೈಟ್‌ಟಾಪಿಂಗ್‌ ಕಾಮಗಾರಿ ಶುರು ಮಾಡಲಾಗಿದೆ ಎಂದು ಹೇಳಿದರು.

ತೆಂಗಿನಕಾಯಿ ದರ ದಾಖಲೆಯ ಏರಿಕೆ..! ಬೆಳೆಗಾರರಿಗೆ ಹರ್ಷ, ಗ್ರಾಹಕರಿಗೆ ಸಂಕಷ್ಟ..!

ಏರೋ ಇಂಡಿಯಾ ವೈಮಾನಿಕ ವಸ್ತು ಪ್ರದರ್ಶನವು ಶುರುವಾದ ಬಳಿಕ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಅಧಿಕ ವಾಹನಗಳು ಓಡಾಡಲಿವೆ. ಹೀಗಾಗಿ, ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಥಣಿಸಂದ್ರ ಮುಖ್ಯರಸ್ತೆಯಲ್ಲಿ1400 ಮಿ.ಮೀ. ಗಾತ್ರದ ಕುಡಿಯುವ ನೀರಿನ ಕೊಳವೆ ಅಳವಡಿಕೆ ಕೆಲಸವನ್ನು ಶೀಘ್ರ ಪೂರ್ಣಗೊಳಿಸಬೇಕು. ರಾಷ್ಟ್ರೋತ್ಥಾನ ಜಂಕ್ಷನ್‌ ಬಳಿ ಬೆಸ್ಕಾಂನಿಂದ ಕೈಗೊಂಡಿರುವ 11 ಕೆ.ವಿ. ಸಾಮರ್ಥ್ಯದ ವಿದ್ಯುತ್‌ ಕೇಬಲ್‌ ಅಳವಡಿಸುವ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿನಾಕಾರಣ ಸಕಾಲ ಅರ್ಜಿಗಳನ್ನು ತಿರಸ್ಕರಿಸಿದ್ದ ಬಿಬಿಎಂಪಿ ಕಂದಾಯ ಅಧಿಕಾರಿಗೆ ತರಾಟೆ

ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿ ಪೂರ್ಣಗೊಂಡ ಕಡೆ ತಾತ್ಕಾಲಿಕವಾಗಿ ಡಾಂಬರು ಹಾಕಿ, ವಾಹನ ಸವಾರರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸರ್ವೀಸ್‌ ರಸ್ತೆ ಮತ್ತು ಪಾದಚಾರಿ ಮಾರ್ಗವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ತಾಕೀತು ಮಾಡಿದರು. ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್‌ ರಮೇಶ್‌ ಮಾತನಾಡಿ, ಒಟ್ಟು 9.5 ಕಿ.ಮೀ. ಉದ್ದದ ಥಣಿಸಂದ್ರ ಮುಖ್ಯ ರಸ್ತೆಯ (ನಾಗವಾರ ಜಂಕ್ಷನ್‌ನಿಂದ ಬಾಗಲೂರು ಕ್ರಾಸ್‌ವರೆಗೆ) ಒಂದು ಮಾರ್ಗದಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿ ಕೈಗೆತ್ತಿಕೊಂಡಿದ್ದು, 5 ದಿನದಲ್ಲಿ1.2 ಕಿ.ಮೀ. ಪೂರ್ಣಗೊಳಿಸಲಾಗಿದೆ. ಜನವರಿ ಅಂತ್ಯದೊಳಗಾಗಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಹೊರ ರಾಜ್ಯದವರಿಗೆ ಬೆಂಗಳೂರು ಸೇಫ್‌ ಅಲ್ವಾ..? ಭಯ ಬೀಳಿಸುತ್ತೆ ದಂಪತಿಯ ಮೇಲೆ ನಡೆದ ಗ್ಯಾಂ

ರಾಷ್ಟ್ರೋತ್ಥಾನ ಜಂಕ್ಷನ್‌ ಮೇಲುಸೇತುವೆ ತಪಾಸಣೆ: ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ರಾಷ್ಟ್ರೋತ್ಥಾನ ಜಂಕ್ಷನ್‌ ಬಳಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಮತ್ತು ಸಿಗ್ನಲ್‌ರಹಿತ ವಾಹನ ಸಂಚಾರಕ್ಕಾಗಿ ಮೇಲ್ಸೇತುವೆಯನ್ನು ನಿರ್ಮಿಸಲಾಗಿದೆ. ಒಟ್ಟು 459 ಮೀಟರ್‌ ಉದ್ದದ 4 ಪಥದ ಮೇಲುಸೇತುವೆ ನಿರ್ಮಾಣ ಕಾಮಗಾರಿಯು ಬಹುತೇಕ ಮುಗಿಯುವ ಹಂತದಲ್ಲಿದೆ. ಮೇಲುಸೇತುವೆಯ ಡಾಂಬರೀಕರಣ, ಮೀಡಿಯನ್‌ ನಿರ್ಮಾಣ ಸೇರಿದಂತೆ ಇನ್ನಿತರೆ ಕೆಲಸಗಳನ್ನು 20 ದಿನಗಳಲ್ಲಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಬೇಕು. ಎರಡೂ ಬದಿಯ ಸರ್ವೀಸ್‌ ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನೂ ಆದಷ್ಟು ಶೀಘ್ರವಾಗಿ ಮುಗಿಸಬೇಕು ಎಂದು ಆಡಳಿತಾಧಿಕಾರಿ ಗೌರವ್‌ ಗುಪ್ತ ಸೂಚಿಸಿದರು.

ಪಾಲಿಕೆಯ ಅಧೀಕ್ಷಕ ಎಂಜಿನಿಯರ್‌ ಎಂ.ಲೋಕೇಶ್‌, ಯಲಹಂಕ ವಲಯದ ಮುಖ್ಯ ಎಂಜಿನಿಯರ್‌ ರಂಗನಾಥ್‌, ಎಇಇ ಚಂದ್ರಶೇಖರ್‌, ಕೆಂಪೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ