ಆ್ಯಪ್ನಗರ

ಬೆಂಗಳೂರಲ್ಲಿ ಮಾರ್ಷಲ್‌ಗಳ ಸೇವೆ ಸ್ಥಗಿತಕ್ಕೆ ಒತ್ತಾಯವೇಕೆ?: ಗಂಭೀರವಾಯಿತೇ ವೃದ್ಧನ ಮೇಲಿನ ದೌರ್ಜನ್ಯ ಪ್ರಕರಣ?

Edited byಗಣೇಶ್ ಪ್ರಸಾದ್ ಕುಂಬ್ಳೆ | Vijaya Karnataka 28 Mar 2024, 7:04 am
ಬೆಂಗಳೂರು: ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸದೆ ದರ್ಪ ಪ್ರದರ್ಶಿಸುತ್ತಿರುವ ಮಾರ್ಷಲ್‌ಗಳಿಂದಾಗಿ ಪಾಲಿಕೆಗೆ ಕೆಟ್ಟ ಹೆಸರು ಬರುತ್ತಿದೆ. ಹೀಗಾಗಿ, ಇವರ ಸೇವೆಯನ್ನು ಸ್ಥಗಿತಗೊಳಿಸಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಒತ್ತಾಯಿಸಿದೆ.
Vijaya Karnataka Web marshals in bengaluru
ಪ್ರಾತಿನಿಧಿಕ ಚಿತ್ರ


''ಬಿಬಿಎಂಪಿಯಲ್ಲಿ ನಿಯಮಬಾಹಿರವಾಗಿ 500ಕ್ಕೂ ಹೆಚ್ಚು ಮಾರ್ಷಲ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಕೋಟ್ಯಂತರ ರೂ. ನಷ್ಟವಾಗುತ್ತಿದೆ. ಮಾರ್ಷಲ್‌ಗಳ ಮುಖ್ಯಸ್ಥರಿಗೆ ಕೇಂದ್ರ ಕಚೇರಿಯಲ್ಲಿ ಕಚೇರಿ ವ್ಯವಸ್ಥೆ ಮಾಡಿಕೊಟ್ಟಿರುವುದು ಕಾನೂನುಬಾಹಿರವಾಗಿದೆ,'' ಎಂದು ಸಂಘದ ಅಧ್ಯಕ್ಷ ಎ.ಅಮೃತ್‌ರಾಜ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೃದ್ಧ ವ್ಯಾಪಾರಿ ಮೇಲೆ ದೌರ್ಜನ್ಯ?

''ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಬ್ಯಾಗ್‌ ಮಾರಾಟ ಮಾಡುತ್ತಿದ್ದ ಬಡ ವಯೋವೃದ್ಧ ವ್ಯಾಪಾರಿಯ ಮೇಲೆ ಮಾರ್ಷಲ್‌ಗಳು ದೌರ್ಜನ್ಯವೆಸಗಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಲ್ಲದೆ, ಈ ಹಿಂದೆ ಯಲಹಂಕ ವಲಯದ ಮಾರ್ಷಲ್‌ಗಳು ಪಾಲಿಕೆಯ ಗಸ್ತು ವಾಹನದಲ್ಲಿ ಮದ್ಯ ಕೊಂಡೊಯ್ದಿದ್ದರು. ಆದ ಕಾರಣ, ಈ ಕೂಡಲೇ ಪಾಲಿಕೆಯಿಂದ ನಿಯೋಜಿಸಿಕೊಂಡಿರುವ ಮಾರ್ಷಲ್‌ಗಳ ಸೇವೆಯನ್ನು ಸ್ಥಗಿತಗೊಳಿಸಬೇಕು,'' ಎಂದು ಮುಖ್ಯ ಆಯುಕ್ತರನ್ನು ಆಗ್ರಹಿಸಿದ್ದಾರೆ.

''ಜೀವನೋಪಾಯಕ್ಕಾಗಿ ಇಳಿ ವಯಸ್ಸಿನಲ್ಲೂ ಬ್ಯಾಗ್‌ಗಳನ್ನು ಮಾರಾಟ ಮಾಡುತ್ತಿದ್ದ ವಯೋವೃದ್ಧರೊಂದಿಗೆ ಮಾನವೀಯತೆ ಮರೆತು, ದೌರ್ಜನ್ಯವೆಸಗಿದ ಮಾರ್ಷಲ್‌ಗಳ ಅಗತ್ಯ ಪಾಲಿಕೆಗೆ ಇದೆಯೇ? ವ್ಯಾಪಾರಿಯು ಕಣ್ಣೀರು ಹಾಕಿದರೂ ಬ್ಯಾಗ್‌ಗಳನ್ನು ಕಿತ್ತುಕೊಂಡು ದರ್ಪ ಪ್ರದರ್ಶಿಸಿದ ಮಾರ್ಷಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು,'' ಎಂದು ಬಿಜೆಪಿಯ ಬೆಂಗಳೂರು ದಕ್ಷಿಣ ಜಿಲ್ಲಾಘಟಕದ ಮಾಜಿ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಒತ್ತಾಯಿಸಿದ್ದಾರೆ.
ಲೇಖಕರ ಬಗ್ಗೆ
ಗಣೇಶ್ ಪ್ರಸಾದ್ ಕುಂಬ್ಳೆ
ವಿಜಯ ಕರ್ನಾಟಕದಲ್ಲಿ ಡಿಜಿಟಲ್ ಪತ್ರಕರ್ತ. ಪತ್ರಿಕೋದ್ಯಮದಲ್ಲಿ 15 ವರ್ಷಗಳ ಅನುಭವ. ಓದುವಿಕೆ, ಬರೆಯುವಿಕೆ, ಯಕ್ಷಗಾನದಲ್ಲಿ ಆಸಕ್ತಿ. ಸಮಯ ಸಿಕ್ಕಾಗ ಚೆಸ್, ಕ್ರಿಕೆಟ್, ಶಟಲ್ ಆಡುವುದು, ಪ್ರವಾಸ, ಚಾರಣ ಮಾಡುವುದು ನೆಚ್ಚಿನ ಹವ್ಯಾಸಗಳು. ಶಿವರಾಮ ಕಾರಂತ ಮತ್ತು ಪೂರ್ಣಚಂದ್ರ ತೇಜಸ್ವಿಯವರ ಬರಹಳೆಂದರೆ ಅಚ್ಚಮೆಚ್ಚು. ರಾಜಕೀಯ, ಕ್ರೀಡೆ, ಮಾನವೀಯ ಸಂವೇದಿ ಲೇಖನಗಳು, ವ್ಯಕ್ತಿಚಿತ್ರ, ನುಡಿಚಿತ್ರ, ಲಲಿತ ಪ್ರಬಂಧಗಳನ್ನು ಬರೆಯುವುದರಲ್ಲಿ ಆಸಕ್ತಿ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ