ಆ್ಯಪ್ನಗರ

ಬೆಂಗಳೂರು ಮಳೆ ಹಾನಿ: ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕೆ..!

ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗ ರೆಡ್ಡಿ, ಶಾಸಕರಾದ ಕೃಷ್ಟ ಬೈರೇಗೌಡ, ಭೈರತಿ ಸುರೇಶ್ ಹಾಜರಿದ್ದರು. ಇದಾದ ಬಳಿಕ ಶಿವಾಜಿ ನಗರ ವಿಧಾನಸಭೆ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಸಿದ್ದರಾಮಯ್ಯ ಅವರು ಸಂಚರಿಸಿ ಮಳೆಯಿಂದ ಆಗಿರುವ ಹಾನಿ ವೀಕ್ಷಿಸಿದರು. ಈ ವೇಳೆ ಶಾಸಕ ರಿಜ್ವಾನ್ ಅರ್ಷದ್ ಹಾಜರಿದ್ದರು. ಗಾಂಧಿ ನಗರ ವಿಧಾನಸಭಾ ಕ್ಷೇತ್ರಕ್ಕೂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Edited byದಿಲೀಪ್ ಡಿ. ಆರ್. | Vijaya Karnataka Web 19 May 2022, 6:07 pm

ಹೈಲೈಟ್ಸ್‌:

  • ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ಹಲವಡೆ ತಗ್ಗು ಪ್ರದೇಶಗಳಲ್ಲಿ ನೀರು
  • ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ಸಿಟಿ ರೌಂಡ್ಸ್ ಮಾಡಿದ್ದರು
  • ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿದ್ದಾರೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web siddu
ಬೆಂಗಳೂರು ಮಳೆ ಹಾನಿ: ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕೆ..!
ಬೆಂಗಳೂರು: ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ಹಲವಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಹಾನಿ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ಸಿಟಿ ರೌಂಡ್ಸ್ ಮಾಡುವ ಮೂಲಕ ಹಾನಿ ಪರಿಶೀಲನೆ ನಡೆಸಿದರು. ಇದೀಗ ಸಿಎಂ ರೌಂಡ್ಸ್ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡಾ ಅಖಾಡಕ್ಕೆ ಇಳಿದಿದ್ದು, ನಗರದ ಬ್ಯಾಟರಾಯನಪುರ ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುರುವಾರ ಸಂಜೆ ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗ ರೆಡ್ಡಿ, ಶಾಸಕರಾದ ಕೃಷ್ಟ ಬೈರೇಗೌಡ, ಭೈರತಿ ಸುರೇಶ್ ಹಾಜರಿದ್ದರು.

ಬೆಂಗಳೂರು ಮಳೆ ಅವಾಂತರ: ಹಾನಿ ಪರಿಶೀಲನೆಗೆ ಸಿಎಂ ಸಿಟಿ ರೌಂಡ್ಸ್
ಇದಾದ ಬಳಿಕ ಶಿವಾಜಿ ನಗರ ವಿಧಾನಸಭೆ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಸಿದ್ದರಾಮಯ್ಯ ಅವರು ಸಂಚರಿಸಿ ಮಳೆಯಿಂದ ಆಗಿರುವ ಹಾನಿ ವೀಕ್ಷಿಸಿದರು. ಈ ವೇಳೆ ಶಾಸಕ ರಿಜ್ವಾನ್ ಅರ್ಷದ್ ಹಾಜರಿದ್ದರು. ಇದಾದ ಬಳಿಕ ಗಾಂಧಿ ನಗರ ವಿಧಾನಸಭಾ ಕ್ಷೇತ್ರಕ್ಕೂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.


ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಹಾನಿ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ಮಹಾಲಕ್ಷ್ಮಿ ಪುರ, ಸರ್ವಜ್ಞ ನಗರ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ ಮನೆಗಳ ತೆರವಿಗೆ ಕ್ರಮ: ಬಸವರಾಜ ಬೊಮ್ಮಾಯಿ
ಮಳೆ ಆತಂಕ: ಪೂರ್ವ ಸಿದ್ಧತೆ ಕೈಗೊಳ್ಳಿ - ಡಿಸಿಗಳಿಗೆ ಅಶೋಕ್ ಸೂಚನೆ

ಜಿಲ್ಲೆಗಳಲ್ಲೂ ಮಳೆ ಆರ್ಭಟ ಆತಂಕದ ಹಿನ್ನೆಲೆಯಲ್ಲಿ ಕಂದಾಯ ಸಚಿವ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್ ಅಶೋಕ್ ರೆಡ್ ಅಲರ್ಟ್‌ ಇರುವ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ದಾವಣಗೆರೆ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು. ಈ ವೇಳೆ ಅಗತ್ಯ ಕ್ರಮ ಮತ್ತು ತೆಗೆದುಕೊಂಡ ಪೂರ್ವ ಸಿದ್ದತೆಗಳ ಪರಿಶೀಲನೆ ನಡೆಸಿ, ಸಲಹೆ ಸೂಚನೆ ನೀಡಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ