ಆ್ಯಪ್ನಗರ

ಬೆಂಗಳೂರಿನಲ್ಲಿ ವರುಣನ ಅಬ್ಬರ! ಗುಡುಗು, ಸಿಡಿಲು ಸಹಿತ ಮಳೆಗೆ ಬೆಚ್ಚಿದ ರಾಜಧಾನಿ ಜನ

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆಯಿಂದ ವರುಣನ ಅಬ್ಬರ ಜೋರಾಗಿದೆ. ನಿರಂತರವಾಗಿ ಕಳೆದ ಎರಡು ಗಂಟೆಗಳಿಂದ ಸಿಲಿಕಾನ್‌ ಸಿಟಿಯ ಹಲವೆಡೆ ಮಳೆ ಸುರಿಯುತ್ತಿದ್ದು, ಗುಡುಗು-ಸಿಡಿಲು ಸಹಿತ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಂಗಳವಾರ, ಬುಧವಾರ ರಾಜಧಾನಿಯಲ್ಲಿ ಆರೆಂಜ್‌ ಅಲರ್ಟ್‌ ನೀಡಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇದೆ.

Authored byಅವಿನಾಶ ವಗರನಾಳ | Vijaya Karnataka Web 18 May 2022, 10:34 am

ಹೈಲೈಟ್ಸ್‌:


  • ಬೆಂಗಳೂರಿನ ಬಹುತೇಕ ಕಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆ
  • ವರುಣನ ಅಬ್ಬರಕ್ಕೆ ಬೆಚ್ಚಿದ ಜನ, ವಾಹನ ಸವಾರರ ಪರದಾಟ
  • ಮಂಗಳವಾರ, ಬುಧವಾರ ರಾಜಧಾನಿಯಲ್ಲಿ ಆರೆಂಜ್‌ ಅಲರ್ಟ್‌
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Bengaluru rain
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮಂಗಳವಾರ ಸಂಜೆಯಿಂದ ಸಿಲಿಕಾನ್‌ ಸಿಟಿಯಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಮಂಗಳವಾರ, ಬುಧವಾರ ಆರೆಂಜ್‌ ಅಲರ್ಟ್‌ ನೀಡಿದ್ದು, ವರ್ಷಧಾರೆ ಮುಂದುವರಿಯುವ ಸಾಧ್ಯತೆ ಇದೆ.
ಜೆಪಿ ನಗರ, ಜಯನಗರ, ಲಾಲ್‌ಬಾಗ್‌, ಚಿಕ್ಕಪೇಟೆ, ಮೆಜೆಸ್ಟಿಕ್‌, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ಎಂಜಿ ರೋಡ್‌, ಕಬ್ಬನ್‌ ಪಾರ್ಕ್‌, ವಿಜಯನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ಮಾಗಡಿ ರೋಡ್‌, ಮೈಸೂರು ರಸ್ತೆ ಸೇರಿ ಬೆಂಗಳೂರಿನ ಬಹುತೇಕ ಕಡೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಕೂಡ ಕೈಕೊಟ್ಟಿದೆ. ಭಾರೀ ಮಳೆಯಿಂದ ಬೆಂಗಳೂರಿನ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ರಾಜ್ಯದಲ್ಲಿ ಮಾನ್ಸೂನ್‌ ಪೂರ್ವ ಮಳೆ ಜೋರಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿಯೂ ಕೂಡ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಹಗಲಿನಲ್ಲಿಯೂ ರಾಜಧಾನಿಯ ಅನೇಕ ಕಡೆ ಮಳೆ ಸುರಿದಿದೆ. ಸಂಜೆ ಸುರಿದ ಮಳೆಯಿಂದಾಗಿ ಕಚೇರಿಯಿಂದ ಮನೆಗೆ ಹೋಗುವವರು ಪರದಾಡುವಂತಾಯಿತು. ಹಲವು ಕಡೆ ವಿವಿಧ ಕಾಮಗಾರಿಗಳಿಗಾಗಿ ಬಿಬಿಎಂಪಿ ರಸ್ತೆಗಳನ್ನು ಅಗೆದಿದ್ದು, ಅಲ್ಲೆಲ್ಲಾ ನೀರು ನಿಂತುಕೊಂಡಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿವೆ.

ಭಾರೀ ಮಳೆಯಿಂದ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ರಾತ್ರಿಯಿಡಿ ಜಾಗರಣೆ ಮಾಡುವಂತಾಗಿದೆ. ವರುಣನ ಅಬ್ಬರಕ್ಕೆ ಹಲವು ಕಡೆ ವಿದ್ಯುತ್‌ ಕೈಕೊಟ್ಟಿದ್ದು, ಕತ್ತಲಿನಲ್ಲಿಯೇ ಕಾಲ ಕಳೆಯುವಂತಾಗಿದೆ. ಭಾರೀ ಮಳೆಯಿಂದ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ಹಲವೆಡೆ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಸಮಸ್ಯೆಗೆ ಸಿಲುಕಿದ್ದಾರೆ.

ಸಿಲಿಕಾನ್ ಸಿಟಿ ಜನರಿಗೆ ತುಂತುರು ಮಳೆಯ ಕಿರಿಕಿರಿ; ಕರಾವಳಿ, ಮಲೆನಾಡಲ್ಲೂ ಮಳೆಗಾಲದ ವಾತಾವರಣ!
2 ದಿನ ಆರೆಂಜ್‌ ಅಲರ್ಟ್‌
ಬೆಂಗಳೂರಿನಲ್ಲಿ ಮೇ 17 ರಿಂದ 21ರವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಮಂಗಳವಾರ ಮತ್ತು ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದ್ದು, ಮೇ 20 ಮತ್ತು 21ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಐಎಂಡಿ ಮುನ್ಸೂಚನೆಯಂತೆ ರಾಜಧಾನಿಯಲ್ಲಿ ಮಂಗಳವಾರ ರಾತ್ರಿ ಭಾರೀ ಮಳೆ ಸುರಿಯುತ್ತಿದೆ.

ಉತ್ತರ ಕನ್ನಡದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ! ಮೇ 18ಕ್ಕೆ ರೆಡ್‌ ಅಲರ್ಟ್‌ ಘೋಷಣೆ
ಮಳೆಗೆ ಬಿಬಿಎಂಪಿ ಸಿದ್ಧತೆ
ಇನ್ನು ಹವಾಮಾನ ಇಲಾಖೆ ನೀಡಿರುವ ಮುಂಗಾರು ಪೂರ್ವ ಮಳೆಯ ಮುನ್ಸೂಚನೆಯಿಂದ ಬಿಬಿಎಂಪಿ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಮಳೆ ಹಾನಿ ನಿರ್ವಹಿಸಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ವಾರ್ಡ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈಗಾಗಲೇ ಅತಿ ಹೆಚ್ಚು ಮಳೆ ನೀರು ನಿಲ್ಲುವ ರಸ್ತೆಗಳನ್ನು ಗುರುತಿಸಿರುವ ಬಿಬಿಎಂಪಿ, ಓರ್ವ ಸಿಬ್ಬಂದಿಯನ್ನು ಸ್ಥಳದಲ್ಲೇ ನಿಯೋಜಿಸಿ ಮಳೆ ನೀರಿನ ತೆರವು ಮಾಡಲು ಮುಂದಾಗಿದೆ.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ