ಆ್ಯಪ್ನಗರ

'ನಮ್ಮ ಮೆಟ್ರೋ'ಗೆ ಇನ್ಫೋಸಿಸ್ 200 ಕೋಟಿ ರೂ. ನೆರವು

ನಮ್ಮ ಮೆಟ್ರೋ ಕಾಮಗಾರಿಗೆ ಇನ್ಫೋಸಿಸ್ ಫೌಂಡೇಶನ್ 200 ಕೋಟಿ ರೂ. ನೆರವು ನೀಡಲು ಮುಂದಾಗಿದೆ. ಸುಧಾ ಮೂರ್ತಿಯವರು ಇನ್ಪೋಸಿಸ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಕೋನಪ್ಪನ ಅಗ್ರಹಾರದಲ್ಲಿ ಮೆಟ್ರೋ ಹಳಿ ಮತ್ತು ಸ್ಟೇಷನ್ ಕಾಮಗಾರಿಗೆ 200 ಕೋಟಿ ರೂ.‌ ನೀಡಲು ನಿರ್ಧಾರ ಮಾಡಿದ್ದು, ಇನ್ಫೋಸಿಸ್ ವತಿಯಿಂದ ಮೆಟ್ರೋ ನಿಲ್ದಾಣ ನಿರ್ಮಾಣ ಮತ್ತು 30 ವರ್ಷದ ಅವಧಿಗೆ ಸಂಸ್ಥೆಯೇ ನಿರ್ವಹಣೆ ಮಾಡಲಿದೆ.

Vijaya Karnataka Web 7 Jul 2018, 8:27 pm
ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಗೆ ಇನ್ಫೋಸಿಸ್ ಫೌಂಡೇಶನ್ 200 ಕೋಟಿ ರೂ. ನೆರವು ನೀಡಲು ಮುಂದಾಗಿದೆ. ಸುಧಾ ಮೂರ್ತಿಯವರು ಇನ್ಪೋಸಿಸ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಕೋನಪ್ಪನ ಅಗ್ರಹಾರದಲ್ಲಿ ಮೆಟ್ರೋ ಹಳಿ ಮತ್ತು ಸ್ಟೇಷನ್ ಕಾಮಗಾರಿಗೆ 200 ಕೋಟಿ ರೂ.‌ ನೀಡಲು ನಿರ್ಧಾರ ಮಾಡಿದ್ದು, ಇನ್ಫೋಸಿಸ್ ವತಿಯಿಂದ ಮೆಟ್ರೋ ನಿಲ್ದಾಣ ನಿರ್ಮಾಣ ಮತ್ತು 30 ವರ್ಷದ ಅವಧಿಗೆ ಸಂಸ್ಥೆಯೇ ನಿರ್ವಹಣೆ ಮಾಡಲಿದೆ.
Vijaya Karnataka Web Sudhamurthy and cm.


ಜುಲೈ 19ರಂದು ವಿಧಾನಸೌಧದಲ್ಲಿ ಬಿಎಂಅರ್‌ಸಿಎಲ್ ಮತ್ತು ಇನ್ಪೋಸಿಸ್ ಫೌಂಡೇಶನ್ ಮಧ್ಯೆ ಈ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ಇನ್ಫೋಸಿಸ್ ನೆರವು ಬಗ್ಗೆ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ನಾರಾಯಣಮೂರ್ತಿ ಕುಟುಂಬ ಪ್ರಮುಖವಾಗಿದೆ. ಮೆಟ್ರೋ ಕಾಮಗಾರಿಗಳಿಗೆ ಇನ್ಪೋಸಿಸ್ ಫೌಂಡೇಷನ್ ವತಿಯಿಂದ ಬೃಹತ್ ಕಾಣಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.

ಇನ್ಪೋಸಿಸ್ ಫೌಂಡೇಷನ್‌ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಕುಮಾರಸ್ವಾಮಿ, ಸಮಾಜಮುಖಿ ಕಾರ್ಯಗಳ ಮೂಲಕ ಇನ್ಪೋಸಿಸ್ ಫೌಂಡೇಷನ್ ಇತರ ಖಾಸಗಿ ಕಂಪನಿಗಳಿಗೆ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.

ಸಂಸ್ಥೆಯ ನೆರವು ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಸುಧಾಮೂರ್ತಿ, ಜನಸಾಮಾನ್ಯರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಮೆಟ್ರೋ ಯೋಜನೆಗೆ ನೆರವು ನೀಡಲಾಗುತ್ತಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ