ಆ್ಯಪ್ನಗರ

ಬಿಎಸ್‌ವೈಗೆ ಹೃದಯಾಘಾತ ಎಂದು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ದೂರು ದಾಖಲು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಬಿಜೆಪಿ ಸಾಮಾಜಿಕ ಜಾಲತಾಣ ಕೋಶದ ಸಹ ಸಂಚಾಲಕ ಸಿದ್ದು ಪುಂಡಿಕಲ್‌ ಅವರು ಮಲ್ಲೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Vijaya Karnataka 21 Dec 2017, 5:00 am

ವಿಕ ಸುದ್ದಿಲೋಕ ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಬಿಜೆಪಿ ಸಾಮಾಜಿಕ ಜಾಲತಾಣ ಕೋಶದ ಸಹ ಸಂಚಾಲಕ ಸಿದ್ದು ಪುಂಡಿಕಲ್‌ ಅವರು ಮಲ್ಲೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸೋಮವಾರ (ಡಿ.18) ಪ್ರಕಟವಾದ ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶವನ್ನು ಟಿವಿಯಲ್ಲಿ ನೋಡುವ ವೇಳೆ ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿದೆ ಎಂದು ಸುಳ್ಳು ಸಂದೇಶಗಳನ್ನು ವಾಟ್ಸ್‌ಆ್ಯಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ರಾಜಕೀಯ ದುರುದ್ದೇಶದಿಂದ ಸಾರ್ವಜನಿಕರು ಹಾಗೂ ಪಕ್ಷದ ಮುಖಂಡರಲ್ಲಿ ಭೀತಿ ಹಾಗೂ ಗೊಂದಲ ಮೂಡಿಸಲು ಕೆಲವರು ಇಂತಹ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಸಿದ್ದು ಪುಂಡಿಕಲ್‌ ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ